ಪತ್ನಿಯ ಕತ್ತು ಹಿಸುಕಿ ಕೊಲೆಗೈದ ಪತಿ;
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಕತ್ತು ಇಸುಕಿ ಕೊಲೆ ಮಾಡಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ. 38 ವರ್ಷದ ಲಕ್ಷ್ಮಿ ಕೊಲೆಯಾದ ದುರ್ದೈವಿಯಾಗಿದ್ದು, ಪತಿ ನಿಂಗಪ್ಪ ಪತ್ನಿಯನ್ನು ಕೊಂದು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.