Crime News: ತುಂಡು ತುಂಡಾಗಿ ಕತ್ತರಿಸಿದ ಮಹಿಳೆಯ ಮೃತದೇಹ ಪತ್ತೆ; ಹೆತ್ತ ತಾಯಿಯನ್ನೇ ಕೊಂದಳಾ ಮಗಳು?

ಮಹಿಳೆಯ ಮೃತದೇಹ ಪತ್ತೆಯಾದ ಫ್ಲ್ಯಾಟ್​​ನಲ್ಲಿದ್ದ 22 ವರ್ಷದ ಪುತ್ರಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತದೇಹ ಕೊಳೆತು ವಾಸನೆ ಬಂದ ಕಾರಣ ಘಟನೆ ಬೆಳಕಿಗೆ ಬಂದಿದೆ.

First published:

  • 17

    Crime News: ತುಂಡು ತುಂಡಾಗಿ ಕತ್ತರಿಸಿದ ಮಹಿಳೆಯ ಮೃತದೇಹ ಪತ್ತೆ; ಹೆತ್ತ ತಾಯಿಯನ್ನೇ ಕೊಂದಳಾ ಮಗಳು?

    ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ತುಂಡು ತುಂಡಾಗಿ ಕತ್ತರಿಸಿ ಮನೆಯ ಕಬೋರ್ಡ್ ಹಾಗೂ ನೀರಿನ ಟ್ಯಾಂಕ್​ನಲ್ಲಿಟ್ಟಿದ್ದ ಮಹಿಳೆಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪ್ಲಾಸ್ಟಿಕ್​ ಕವರ್​ವೊಂದರಲ್ಲಿ ಪತ್ತೆಯಾಗಿದೆ. ಮುಂಬೈನ ಲಾಲ್​​ಬಾಗ್​ ಪ್ರದೇಶದ ಇಬ್ರಾಹಿಂ ಕಸಮ್​ ಭವನದ ಮೊದಲ ಮಹಡಿಯಲ್ಲಿ 50-55 ವರ್ಷದ ಮಹಿಳೆಯ ಮೃತದೇಹ ಭಾಗಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಹಿಳೆಯ ಮೃತದೇಹವನ್ನು ಪ್ಲಾಸ್ಟಿಕ್​ ಕವರ್​​ನಲ್ಲಿ ಸುತ್ತಿಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. (Photo:Twitter ani)

    MORE
    GALLERIES

  • 27

    Crime News: ತುಂಡು ತುಂಡಾಗಿ ಕತ್ತರಿಸಿದ ಮಹಿಳೆಯ ಮೃತದೇಹ ಪತ್ತೆ; ಹೆತ್ತ ತಾಯಿಯನ್ನೇ ಕೊಂದಳಾ ಮಗಳು?

    ಮಹಿಳೆಯ ಮೃತದೇಹ ಪತ್ತೆಯಾದ ಫ್ಲ್ಯಾಟ್​​ನಲ್ಲಿದ್ದ 22 ವರ್ಷದ ಪುತ್ರಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತದೇಹ ಕೊಳೆತು ವಾಸನೆ ಬಂದ ಕಾರಣ ಘಟನೆ ಬೆಳಕಿಗೆ ಬಂದಿದ್ದು, ಮಹಿಳೆ ಸಾವನ್ನಪ್ಪಿದ್ದು ಯಾವಾಗ? ಹೇಗೆ ಸಾವನ್ನಪ್ಪಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. (Photo:Twitter ani)

    MORE
    GALLERIES

  • 37

    Crime News: ತುಂಡು ತುಂಡಾಗಿ ಕತ್ತರಿಸಿದ ಮಹಿಳೆಯ ಮೃತದೇಹ ಪತ್ತೆ; ಹೆತ್ತ ತಾಯಿಯನ್ನೇ ಕೊಂದಳಾ ಮಗಳು?

    ಘಟನೆ ಕುರಿತಂತೆ ಮಂಗಳವಾರ ಸಂಜೆ ನಮಗೆ ಮಾಹಿತಿ ಸಿಕ್ಕಿತ್ತು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಸದ್ಯ ವಿಚಾರಣೆ ನಡೆಸಲಾಗುತ್ತಿದೆ, ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದೆವೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾಗಿ ಡಿಸಿಪಿ ಪ್ರವೀಣ್ ಮುಂಡೆ ಮಾಹಿತಿ ನೀಡಿದ್ದಾರೆ. (Photo:Twitter ani)

    MORE
    GALLERIES

  • 47

    Crime News: ತುಂಡು ತುಂಡಾಗಿ ಕತ್ತರಿಸಿದ ಮಹಿಳೆಯ ಮೃತದೇಹ ಪತ್ತೆ; ಹೆತ್ತ ತಾಯಿಯನ್ನೇ ಕೊಂದಳಾ ಮಗಳು?

    ಮೃತದೇಹದ ಸಿಕ್ಕ ಪರಿಸ್ಥಿತಿಯನ್ನು ನೋಡಿದ ಪೊಲೀಸರು ಮಹಿಳೆ ಎರಡು ದಿನಗಳ ಹಿಂದೆಯೇ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಮೃತ ಮಹಿಳೆಯ ಸಹೋದರ ಪೊಲೀಸರಿಗೆ ನಾಪತ್ತೆ ದೂರು ನೀಡಿದ ವೇಳೆ ಅಕ್ಕಪಕ್ಕದ ಮನೆಯವರನ್ನು ವಿಚಾರಣೆ ನಡೆಸಿದ್ದರು. (Photo:Twitter ani)

    MORE
    GALLERIES

  • 57

    Crime News: ತುಂಡು ತುಂಡಾಗಿ ಕತ್ತರಿಸಿದ ಮಹಿಳೆಯ ಮೃತದೇಹ ಪತ್ತೆ; ಹೆತ್ತ ತಾಯಿಯನ್ನೇ ಕೊಂದಳಾ ಮಗಳು?

    ಮಹಿಳೆ ಕಳೆದ ಎರಡು ತಿಂಗಳಿನಿಂದ ನಾಪತ್ತೆಯಾಗಿದ್ದರು ಎಂದು ಸಹೋದರ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಮಹಿಳೆ ಸಾವನ್ನಪ್ಪಿದ್ದರು ಸಹ ಅಕ್ಕಪಕ್ಕದ ಮನೆಯವರಿಗೆ ಯಾವುದೇ ರೀತಿಯ ಅನುಮಾನ ಬಂದಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Crime News: ತುಂಡು ತುಂಡಾಗಿ ಕತ್ತರಿಸಿದ ಮಹಿಳೆಯ ಮೃತದೇಹ ಪತ್ತೆ; ಹೆತ್ತ ತಾಯಿಯನ್ನೇ ಕೊಂದಳಾ ಮಗಳು?

    ನಾಪತ್ತೆ ಪ್ರಕರಣ ಸದ್ಯ ಅನುಮಾಸ್ಪದ ಸಾವಿನ ಪ್ರಕರಣವಾಗಿ ಬದಲಾಗಿದ್ದು, ಪೊಲೀಸರು ವಿವಿಧ ಮಾರ್ಗಗಳಲ್ಲಿ ಪ್ರಕರಣದ ಬಗ್ಗೆ ತನಿಖೆ ಚುರುಕುಗೊಳಿಸಿದ್ದಾರೆ. ಮಹಿಳೆಯದ್ದು ಸಹಜ ಸಾವು ಅಥವಾ ಯಾರಾದರೂ ಕೊಲೆ ಮಾಡಿದ್ದಾರಾ? ಕೊಲೆಯಾದರೆ ಕಾರಣವೇನು? ಯಾರು ಕೊಲೆ ಮಾಡಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಮಹಿಳೆಯ ಪುತ್ರಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಆಕೆಯನ್ನು ಪ್ರಶ್ನಿಸುತ್ತಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Crime News: ತುಂಡು ತುಂಡಾಗಿ ಕತ್ತರಿಸಿದ ಮಹಿಳೆಯ ಮೃತದೇಹ ಪತ್ತೆ; ಹೆತ್ತ ತಾಯಿಯನ್ನೇ ಕೊಂದಳಾ ಮಗಳು?

    ಕೆಲ ದಿನಗಳ ಮುನ್ನ ಇಂತಹದ್ದೆ ಪ್ರಕರಣ ಮುಂಬೈನಲ್ಲಿ ವರದಿಯಾಗಿತ್ತು. ನಿರ್ಮಾಣ ಹಂತದಲ್ಲಿದ್ದ ಕಟ್ಟಡದ 12ನೇ ಮಹಡಿಯಲ್ಲಿ 19 ವರ್ಷದ ಯುವಕನ ಮೃತದೇಹ ಕೈ-ಕಾಲು ಕಟ್ಟಿ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತ ವ್ಯಕ್ತಿಯನ್ನು ಪಶ್ಚಿಮ ಬಂಗಾಳಕ್ಕೆ ಸೇರಿದ ಮಸೂದ್​ ರಂಜಾನ್​ ಎಂದು ಗುರುತಿಸಿದ್ದರು. ಈತ ಕೂಡ ಮೃತಪಟ್ಟ ಒಂದು ದಿನ ಮುನ್ನ ನಾಪತ್ತೆಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES