Monsoon 2020: ಹುಬ್ಬಳ್ಳಿಯಲ್ಲಿ ವರುಣನ ಆರ್ಭಟ : ಕೊಚ್ಚಿಹೋದ ಬೆಳೆ, ಕುಸಿದ ಮನೆಗಳು

ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಒಂದೇ ದಿನ 40 ಮಿಲಿಮೀಟರ್ ಸುರಿದಿದೆ. ಶೀತ ಗಾಳಿಯೊಂದಿಗೆ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ವರುಣನ ಆರ್ಭಣಟಕ್ಕೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಪ್ರವಾಹದ ರಭಸಕ್ಕೆ ಜಮೀನಿನಲ್ಲಿ ಬೆಳೆಸಿದ್ದ ಗೋವಿನ ಜೋಳ ಕೊಚ್ಚಿ ಹೋಗಿದೆ. ಮಳೆಯ ಅಬ್ಬರಕ್ಕೆ ರೈತರು ಕಂಗೆಟ್ಟಿದ್ದಾರೆ.‌ ಹುಬ್ಬಳ್ಳಿ ಮತ್ತು ಕುಂದಗೋಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮನೆಗಳ ಗೋಡೆಗಳು‌ ‌ಕುಸಿದಿವೆ. 

First published: