ಹೆಣ್ಣುಮಕ್ಕಳು ಹುಟ್ಟಿದರೆ ತಲೆಯ ಮೇಲೆ ಕೈಹೊತ್ತು ಕೂರುತ್ತಾರೆ. ಹಿಂದಿನಿಂದಲೂ ಹೆಣ್ಣು ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತ ಎಂಬ ಮಾತಿದೆ. ಕಾಲ ಉರುಳಿದಂತೆ ಮಹಿಳೆಯರಿಗೆ ಎಲ್ಲಾ ಕ್ಷೇತ್ರದಲ್ಲೂ ಮೀಸಲಾತಿ ನೀಡಲಾಗುತ್ತಿದೆ. ಹೆಣ್ಣುಮಕ್ಕಳು ಗಂಡುಮಕ್ಕಳಂತೆಯೇ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಹಾಸನ ಜಿಲ್ಲೆಯ ಮಹಿಳೆಯೊಬ್ಬರು ವಿಶ್ವಸಂಸ್ಥೆ ಕರ್ತವ್ಯಕ್ಕೆ ಆಯ್ಕೆಯಾಗಿದ್ದಾರೆ.