ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಆಗಮಿಸುವ ಅಭ್ಯರ್ಥಿಗಳು ಶೂ ಮತ್ತು ಬೆಲ್ಟ್ ಧರಸಿ ಬರುವುದನ್ನು ನಿಷೇಧಿಸಲಾಗಿದೆ. ಪ್ರವೇಶ ಪತ್ರದಲ್ಲಿ ತಮ್ಮ ಸಹಿ ಮತ್ತು ಭಾವಚಿತ್ರ ಪ್ರಕಟವಾಗದಿರುವ ಅಥವಾ ಸಹಿ ಮತ್ತು ಬಾವಚಿತ್ರ ವ್ಯತ್ಯಾಸವಿರುವ ಅಭ್ಯರ್ಥಿಯು ತನ್ನೊಂದಿಗೆ ಆನ್‌ಲೈನ್ ಅರ್ಜಿ, ತಮ್ಮ ಇತ್ತೀಚಿನ ಭಾವಚಿತ್ರ ಮತ್ತು ಆಧಾರ್ ಕಾರ್ಡ್ ಅಥವಾ ಇನ್ಯಾವುದೇ ಅಧಿಕೃತ ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರದ ಅಧಿಕಾರಿಗಳಿಗೆ ತೋರಿಸಬೇಕು ಎಂದು ತಿಳಿಸಲಾಗಿದೆ.