Pushpa - The rise : ಭಾರತೀಯ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿರುವ ಪುಷ್ಪ ಸಿನಿಮಾ ಡಿಸೆಂಬರ್ 17ರಂದು ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರವನ್ನು ಸುಕುಮಾರ್ ನಿರ್ದೇಶಿಸಿದ್ದಾರೆ. ಕೆಂಪು ಚಂದನದ ಕಳ್ಳಸಾಗಣೆದಾರರ ನೈಜ ಘಟನೆಗಳನ್ನು ಆಧರಿಸಿದೆ. ತೆಲುಗು, ಮಲಯಾಳಂ, ಕನ್ನಡ, ಹಿಂದಿ ಮತ್ತು ತಮಿಳು ಭಾಷೆಗಳಲ್ಲಿ ಚಿತ್ರ ಏಕಕಾಲಕ್ಕೆ ಬಿಡುಗಡೆಯಾಗಲಿದೆ.
Ghani: : 'ಘನಿ' ಸ್ಪೋರ್ಟ್ಸ್ ಡ್ರಾಮಾ ಚಿತ್ರವಾಗಿದ್ದು, ಡಿಸೆಂಬರ್ 24 ರಂದು ಬಿಡುಗಡೆಯಾಗಲಿದೆ. ಚಿತ್ರದಲ್ಲಿ ವರುಣ್ ತೇಜ್ ಪ್ರಮುಖ ಪಾತ್ರದಲ್ಲಿದ್ದು, ಬಾಕ್ಸರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರ ಎದುರು ನಟಿ ಸಾಯಿ ಮಂಜ್ರೇಕರ್ ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್ ನಟ ಸುನೀಲ್ ಶೆಟ್ಟಿ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.