ಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕಿಂತ ಹೆಚ್ಚು ಅವಧಿಯಿಂದ ತಳಮಟ್ಟದಿಂದ ಕಾರ್ಯನಿರ್ವಹಿಸುತ್ತಿರುವ ಭಾರತದ ಏಕೋಪಾಸ್ ಪ್ರತಿನಿಧಿಯಾಗಿ ನಾನು ಬಂದಿದ್ದೇನೆ. ಪರಿಸರ ಸುಸ್ಥಿರತೆ ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟ-ನಿರ್ದೇಶಕನಾಗಿ, ಪರಿಸರ ಸುಸ್ಥಿರತೆ ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದೇ ನನ್ನ ಉದ್ದೇಶ ಎಂದು ರಿಷಬ್ ಹೇಳಿದ್ದರು.