ಈಗಾಗಲೇ ಗ್ಯಾಂಗ್ರಿನ್ ನಿಂದ ಎಡಗಾಲು ತೆಗೆಯಲಾಗಿದೆ. ಗ್ಯಾಂಗ್ರಿನ್ ಬಲಗಾಲಿಗೂ ಸ್ಪ್ರೆಡ್ ಆಗುತ್ತಿದ್ದು ತಕ್ಷಣ ಐಸಿಯುನಲ್ಲಿ ಚಿಕಿತ್ಸೆ ಪ್ರಾರಂಭಿಸಲಾಗಿದೆ. ಕಳೆದ ಕೆಲ ವರ್ಷಗಳಿಂದ ಗ್ಯಾಂಗ್ರಿನ್ ನಿಂದ ಬಳಲುತ್ತಿರುವ ಕಾರಣ ಹಣದ ಸಮಸ್ಯೆ ಇದೆ ನಿಜ. ಆದರೆ ಜನರಿಂದ ಹಣ ಪಡೆಯುವುದು ಇಷ್ಟವಿಲ್ಲ. ಫಿಲ್ಮ್ ಚೇಂಬರ್, ಸರ್ಕಾರ ಅಥವ ಇನ್ಶೂರೆನ್ಸ್ ಕಡೆಯಿಂದ ಹಣ ಕೊಟ್ಟರೆ ಚಿಕಿತ್ಸೆಗೆ ಸಹಾಯವಾಗುತ್ತದೆ ಎಂದು ನಟ ಸತ್ಯಜಿತ್ ಪುತ್ರ ಆಕಾಶ್ ಜಿತ್ ಅವರು ಮನವಿ ಮಾಡಿದ್ದಾರೆ.