Sharath Babu: ಹಿರಿಯ ನಟ ಶರತ್ ಬಾಬು ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು, ಅಭಿಮಾನಿಗಳಲ್ಲಿ ಆತಂಕ
ಹಿರಿಯ ನಟ ಶರತ್ ಬಾಬು ಅವರ ಆರೋಗ್ಯ ಚಿಂತಾಜನಕವಾಗಿದೆ. ಸದ್ಯ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಚಿತ್ರರಂಗ ಮತ್ತು ರಾಜಕೀಯ ಗಣ್ಯರು ಶರತ್ ಬಾಬು ಅವರ ಆರೋಗ್ಯ ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ದಕ್ಷಿಣದ ಹಿರಿಯ ನಟ ಶರತ್ ಬಾಬು ಸುಮಾರು 4 ದಶಕಗಳಿಂದ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಸುಮಾರು 20ಕ್ಕಿಂತ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.
2/ 7
1951 ರಲ್ಲಿ ಆಂಧ್ರಪ್ರದೇಶದಲ್ಲಿ ಜನಿಸಿದ ಇವರು 1973 ರಲ್ಲಿ ತೆರೆಕಂಡ `ರಾಮರಾಜ್ಯಂ' ತೆಲುಗು ಚಿತ್ರದಿಂದ ಸಿನಿಪಯಣ ಆರಂಭಿಸಿದರು. ಶರತ್ ಬಾಬು ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ನಾಯಕನಾಗಿ ಮತ್ತು ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ನೂರಾರು ಚಿತ್ರಗಳಲ್ಲಿ ನಟಿಸಿದ್ದಾರೆ.
3/ 7
ಸುಮಾರು 8 ನಂದಿ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇವರ ಮೂಲ ಹೆಸರು ಸತ್ಯಂ ಬಾಬು ದೀಕ್ಷಿತಲು. ನಾಯಕನಾಗಿ ಮತ್ತು ಪೋಷಕನಟನಾಗಿ ಸಾಕಷ್ಟು ಮನ್ನಣೆ ಪಡೆದಿದ್ದಾರೆ. ಕನ್ನಡದಲ್ಲಿ ಅವರು ನಟಿಸಿದ ಅಮೃತವರ್ಷಿಣಿ ಸಿನಿಮಾ ಸೂಪರ್ ಹಿಟ್ ಆಗಿತ್ತು.
4/ 7
ಶರತ್ ಬಾಬು 1973 ರಲ್ಲಿ 'ರಾಮ ರಾಜ್ಯ' ಚಿತ್ರದ ಮೂಲಕ ನಟನಾಗಿ ಎಂಟ್ರಿ ಕೊಟ್ಟರು. ಇಂಡಸ್ಟ್ರಿಯಲ್ಲಿ 50 ವರ್ಷ ಪೂರೈಸಿರುವ ಅವರಿಗೆ ಸದ್ಯ 72 ವರ್ಷವಾಗಿದೆ.
5/ 7
ಶರತ್ ಬಾಬು ರಮಾಪ್ರಭಾ ಮತ್ತು ಸ್ನೇಹಾ ನಂಬಿಯಾರ್ ಅವರನ್ನು ವಿವಾಹವಾಗಿದ್ರೂ ಇಬ್ಬರಿಗೂ ವಿಚ್ಛೇದನ ನೀಡಿದ್ದಾರೆ. ಪ್ರಸ್ತುತ ಚೆನ್ನೈನಲ್ಲಿ ನೆಲೆಸಿದ್ದಾರೆ.
6/ 7
ಇತ್ತೀಚೆಗೆ ಶರತ್ ಬಾಬು ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂಬ ಸುದ್ದಿ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
7/ 7
ಇತ್ತೀಚೆಗೆ ಕರಾಟೆ ಕಲ್ಯಾಣಿ ಅವರು ಶರತ್ ಬಾಬು ಅವರ ಆರೋಗ್ಯದ ಬಗ್ಗೆ ಪೋಸ್ಟ್ ಮಾಡಿದ್ದಾರೆ. ನನ್ನ ನೆಚ್ಚಿನ ಹೀರೋ.. ಅಂದಿನ ಹುಡುಗಿಯರ ಕನಸಿನ ರಾಜಕುಮಾರ ಶರತ್ ಬಾಬು ಬೇಗ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸೋಣ.. ಶ್ರೀರಾಮರಕ್ಷಾ’ ಎಂದು ಕರಾಟೆ ಕಲ್ಯಾಣಿ ಪೋಸ್ಟ್ ಮಾಡಿದ್ದಾರೆ.
First published:
17