ಸ್ಯಾಂಡಲ್ವುಡ್ನ ಮತ್ತೊಂದು ಸ್ಟಾರ್ ಜೋಡಿ ಹಸೆಮಣೆ ಏರಲು ಸಿದ್ಧವಾಗಿದೆ. ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
2/ 8
ಈ ಜೋಡಿ ಮದುವೆ ಆಗುತ್ತಾರೆ ಅಂತ ಸುದ್ದಿ ಹಬ್ಬಿದ ಬೆನ್ನಲ್ಲೇ ಅದಕ್ಕೆ ಸಾಕ್ಷಿ ಎನ್ನುವಂತೆ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿರುವ ಹರಿಪ್ರಿಯಾ ಅವರ ನಿವಾಸದಲ್ಲಿ ಸರಳವಾಗಿ ನಿಶ್ಚಿತಾರ್ಥ ನೆರವೇರಿತ್ತು.
3/ 8
ಹೊಸದೊಂದು ಸಿನಿಮಾದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೊತೆಯಾಗಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಆಗಿದೆ ಎಂದು ಹೇಳಲಾಗ್ತಿದೆ.
4/ 8
ವಶಿಷ್ಠ ಸಿಂಹ- ಹರಿಪ್ರಿಯಾ ಲವ್ ಸ್ಟೋರಿಗೆ ಕಾರಣವಾದ ಚಿತ್ರಕ್ಕೆ ಈ ಜೋಡಿ ಡಬ್ಬಿಂಗ್ ಮಾಡಿದೆ. ಎವರ್ ಸಿನಿಮಾದ ರಿಮೇಕ್ನಲ್ಲಿ ಒಟ್ಟಿಗೆ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ನಟಿಸುತ್ತಿದ್ದಾರೆ.
5/ 8
ನಿಶ್ಚಿತಾರ್ಥ ಮಾಡಿಕೊಂಡ ಬಳಿಕ ಎವರ್ ಚಿತ್ರದ ತೆಲುಗಿನ ರಿಮೇಕ್ ಚಿತ್ರಕ್ಕೆ ವಶಿಷ್ಠ ಸಿಂಹ-ಹರಿಪ್ರಿಯಾ ಒಟ್ಟಿಗೆ ಡಬ್ಬಿಂಗ್ ಮಾಡಿದ್ದಾರೆ. ಬಹುತೇಕ ಚಿತ್ರೀಕರಣ ಆಗಿರುವ ಈ ಚಿತ್ರಕ್ಕೆ ಕನ್ನಡದಲ್ಲಿ ಇನ್ನು ಹೆಸರಿಟ್ಟಿಲ್ಲ.
6/ 8
ಇನ್ನೂ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ನಟನೆಯ ಸಿನಿಮಾ ಮುಂದಿನ 2023ರಲ್ಲಿ ತೆರೆಗೆ ಅಪ್ಪಳಿಸಲಿದೆ. ಸಿನಿಮಾ ರಿಲೀಸ್ ಜೊತೆ ಮದುವೆಯ ಗುಡ್ ನ್ಯೂಸ್ ಕೂಡ ಸಿಂಹಪ್ರಿಯ ಜೋಡಿ ಸದ್ಯದಲ್ಲೇ ಅಧಿಕೃತವಾಗಿ ತಿಳಿಸಲಿದ್ದಾರೆ.
7/ 8
ಹರಿಪ್ರಿಯಾಗೆ ವಸಿಷ್ಠ ಸಿಂಹ ಕ್ರಿಸ್ಟಲ್ ಎಂಬ ನಾಯಿಮರಿಯನ್ನು ಉಡುಗೊರೆಯಾಗಿ ನೀಡಿದ್ದರು.ಈ ಕ್ರಿಸ್ಟಲ್ ಬೆಳೆಯುತ್ತಾ, ಬೆಳೆಯುತ್ತಾ ನಮ್ಮ ಆತ್ಮೀಯತೆ ಹೆಚ್ಚಾಯ್ತು. ಪ್ರೀತಿಯು ಬೆಳೆಯಿತು. ಕ್ರಿಸ್ಟಲ್ ನಮ್ಮಿಬ್ಬರ ಪ್ರೀತಿಗೆ ಕನ್ನಡಿ ಎಂದು ಹರಿಪ್ರಿಯಾ ವಿಡಿಯೋದಲ್ಲಿ ಹೇಳಿಕೊಂಡಿದ್ದರು.
8/ 8
ಗುರುಹಿರಿಯರ ಸಮ್ಮತಿಯ ಮೇರೆಗೆ ಇತ್ತೀಚೆಗೆ ಎಂಗೇಜ್ಮೆಂಟ್ ಮಾಡಿಕೊಂಡಿರುವ ವಸಿಷ್ಠ ಸಿಂಹ-ಹರಿಪ್ರಿಯಾ 2023ರಲ್ಲಿ ಫೆಬ್ರವರಿ ಅಥವಾ ಮಾರ್ಚ್ನ ಶುಭ ಮುಹೂರ್ತದಲ್ಲಿ ಹಸೆಮಣೆ ಏರಲು ಈ ಜೋಡಿ ರೆಡಿಯಾಗಿದ್ದಾರಂತೆ.