Vasishta Simha-Haripriya: ಉಡುಪಿ ಕೃಷ್ಣ ಮಠಕ್ಕೆ ವಸಿಷ್ಠ-ಹರಿಪ್ರಿಯಾ ಭೇಟಿ! ಮುಂದಿನ ವರ್ಷ ಮಾರ್ಚ್ನಲ್ಲಿ ಮದುವೆ ಫಿಕ್ಸ್?
ಸ್ಯಾಂಡಲ್ವುಡ್ ಕ್ಯೂಟ್ ಜೋಡಿ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯ ಮಠಕ್ಕೆ ಭೇಟಿ ನೀಡಿ, ಕಾಣಿಯೂರು ಮಠಾಧೀಶ ವಿದ್ಯಾವಲ್ಲಭ ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು.
ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡ ಸ್ಯಾಂಡಲ್ವುಡ್ ಕ್ಯೂಟ್ ಜೋಡಿ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ.
2/ 8
ಕೃಷ್ಣ ಮಠದ ಕನಕ ನವಗ್ರಹ ಕಿಂಡಿ ಮೂಲಕ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕೃಷ್ಣ ಮಠದ ರಥಬೀದಿಯಲ್ಲಿ ಇರುವ ಕಾಣಿಯೂರು ಮಠಕ್ಕೆ ಭೇಟಿ ನೀಡಿದ್ದಾರೆ.
3/ 8
ಕಾಣಿಯೂರು ಮಠಾಧೀಶ ವಿದ್ಯಾವಲ್ಲಭ ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು. ಈ ವೇಳೆ ಕಾಣಿಯೂರು ಶ್ರೀಗಳು ನವ ಜೋಡಿಗೆ ಮಠದ ವತಿಯಿಂದ ಗೌರವ ಸಲ್ಲಿಸಿದರು.
4/ 8
ಮುಂದಿನ ವರ್ಷ ಮಾರ್ಚ್ನಲ್ಲಿ ಈ ಜೋಡಿ ಮದುವೆ ಆಗ್ತಾರೆ ಎನ್ನುವ ಸುದ್ದಿಗಳಿವೆ. ಅದಕ್ಕೆ ಉಡುಪಿಗೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ.
5/ 8
ಸ್ಯಾಂಡಲ್ವುಡ್ನ ಮತ್ತೊಂದು ಸ್ಟಾರ್ ಜೋಡಿ ಹಸೆಮಣೆ ಏರಲು ಸಿದ್ಧವಾಗಿದೆ. ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
6/ 8
ಈ ಜೋಡಿ ಮದುವೆ ಆಗುತ್ತಾರೆ ಅಂತ ಸುದ್ದಿ ಹಬ್ಬಿದ ಬೆನ್ನಲ್ಲೇ ಅದಕ್ಕೆ ಸಾಕ್ಷಿ ಎನ್ನುವಂತೆ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿರುವ ಹರಿಪ್ರಿಯಾ ಅವರ ನಿವಾಸದಲ್ಲಿ ಸರಳವಾಗಿ ನಿಶ್ಚಿತಾರ್ಥ ನೆರವೇರಿತ್ತು.
7/ 8
ನಿಶ್ಚಿತಾರ್ಥ ಮಾಡಿಕೊಂಡ ಬಳಿಕ ತೆಲುಗಿನ ಎವರ್ ಚಿತ್ರದ ರಿಮೇಕ್ ಚಿತ್ರಕ್ಕೆ ವಶಿಷ್ಠ ಸಿಂಹ-ಹರಿಪ್ರಿಯಾ ಒಟ್ಟಿಗೆ ಡಬ್ಬಿಂಗ್ ಮಾಡಿದ್ದಾರೆ. ಬಹುತೇಕ ಚಿತ್ರೀಕರಣ ಆಗಿರುವ ಈ ಚಿತ್ರಕ್ಕೆ ಕನ್ನಡದಲ್ಲಿ ಇನ್ನು ಹೆಸರಿಟ್ಟಿಲ್ಲ.
8/ 8
ಇನ್ನೂ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ನಟನೆಯ ಸಿನಿಮಾ ಮುಂದಿನ 2023ರಲ್ಲಿ ತೆರೆಗೆ ಅಪ್ಪಳಿಸಲಿದೆ. ಸಿನಿಮಾ ರಿಲೀಸ್ ಜೊತೆ ಮದುವೆಯ ಗುಡ್ ನ್ಯೂಸ್ ಕೂಡ ಸಿಂಹಪ್ರಿಯ ಜೋಡಿ ಸದ್ಯದಲ್ಲೇ ಅಧಿಕೃತವಾಗಿ ತಿಳಿಸಲಿದ್ದಾರೆ.