ಸ್ಯಾಂಡಲ್ವುಡ್ ನಟಿ ಪ್ರೇಮಾ ಅವರು ಎರಡನೇ ಮದುವೆ ಬಗ್ಗೆ ಮೌನ ಮುರಿದಿದ್ದಾರೆ ಈ ಮೂಲಕ ಹಲವು ದಿನಗಳಿಂದ ಓಡಾಡುತ್ತಿರುವ ಮದುವೆ ವಿಚಾರದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.
2/ 7
ನಟಿ ಎರಡನೇ ಮದುವೆ ಆಗುತ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ ಪ್ರೇಮ ಗರಂ ಆಗಿದ್ದಾರೆ. ನಾನು ಸದ್ಯಕ್ಕೆ ಎರಡನೇ ಮದುವೆ ಆಗುವುದಿಲ್ಲ ಎಂದಿದ್ದಾರೆ.
3/ 7
ದೇವಸ್ಥಾನಕ್ಕೂ ಹೋಗೊದು ತಪ್ಪು ಅಂದರೆ ಏನು ಮಾಡುವುದು? ತುಂಬಾ ದಿನ ಆಗಿತ್ತು ಅಂತ ಕೊರಗಜ್ಜನ ದೇವಾಲಯಕ್ಕೆ ಹೋಗಿದ್ದೆ ಎಂದಿದ್ದಾರೆ ಪ್ರೇಮ.
4/ 7
ಅಲ್ಲಿ ನಾನು ನನ್ನ ಮದುವೆ ಬಗ್ಗೆ ಪ್ರಸ್ತಾಪ ಮಾಡಿಲ್ಲ. ನಾನು ಇನ್ನು ಸಾಕಷ್ಟು ಸಾಧಿಸಬೇಕಾದದ್ದು ಇದೆ. ನಾನು ಮದುವೆ ಅದರೆ ನನ್ನ ಕುಟುಂಬ ಹಾಗೂ ಅಭಿಮಾನಿಗಳ ಗಮನಕ್ಕೆ ತರುತ್ತೇನೆ ಎಂದಿದ್ದಾರೆ.
5/ 7
ಹಲವು ವರ್ಷಗಳ ಹಿಂದೆ ವಿಚ್ಛೇದನ ಪಡೆದು ಒಂಟಿಯಾಗಿ ಜೀವನ ಸಾಗಿಸುತ್ತಿರುವ ನಟಿ ಪ್ರೇಮಾ ಇದೀಗ 2ನೇ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಕಂಕಣ ಭಾಗ್ಯ ಕರುಣಿಸುವಂತೆ ದೈವದ ಮೋರೆ ಹೋಗಿದ್ದಾರೆ ಎನ್ನುವ ಸುದ್ದಿ ಕೇಳಿ ಬಂದಿತ್ತು.
6/ 7
ಕಾಪು ಕೊರಗಜ್ಜ ಸನ್ನಿಧಿಯಲ್ಲಿ ಮದುವೆಗಾಗಿ ಪ್ರಾರ್ಥನೆ ಮಾಡಿದ್ದಾರೆ ಎನ್ನಲಾಗಿತ್ತು. ಖಾಸಗಿ ಕಾರ್ಯಕ್ರಮಕ್ಕೆ ಭೇಟಿ ನೀಡಿದ ನಟಿ ಪ್ರೇಮಾ ಕೊರಗಜ್ಜನ ಸನ್ನಿಧಿಗೂ ಭೇಟಿ ನೀಡಿದ್ದರು.
7/ 7
ಉಡುಪಿ ಜಿಲ್ಲೆಯ ಕಾಪು ಕೊರಗಜ್ಜ ಸನ್ನಿಧಿ ಇದಾಗಿದ್ದು, ನಟಿ ಪ್ರೇಮಾ ಜೊತೆ ತಮ್ಮ ಅಯ್ಯಪ್ಪ ಪತ್ನಿ ನಟಿ ಅನು ಅಯ್ಯಪ್ಪ ಕೂಡ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.