ಮತ್ತೆ ಬೆಳ್ಳಿತೆರೆಗೆ ಕಮ್ ಬ್ಯಾಕ್ ಮಾಡಲು ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದ್ದಾರೆ. ರಾಧಿಕಾ ಪಂಡಿತ್ ಅವರು ಕೊನೆಯಾದಾಗಿ ಅಭಿನಯಿಸಿದ ಚಿತ್ರ ಆದಿ ಲಕ್ಷ್ಮಿ ಪುರಾಣ ಆಗಿದೆ. ಮನೆ, ಸಂಸಾರ ಎಂದು ಮಕ್ಕಳ ಜೊತೆ ಫುಲ್ ಟೈಮ್ ಬ್ಯುಸಿಯಾಗಿದ್ದ ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆ್ಯಕ್ಟೀವ್ ಆಗಿದ್ರು. ಮಕ್ಕಳ ಜೊತೆಗಿನ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ರು, ಬಳಿಕ ಹಬ್ಬಗಳಲ್ಲಿ ಶುಭಾಶಯ ಕೋರುವ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ. ಅಪಾರ ಅಭಿಮಾನಿ ಬಳಗ ಹೊಂದಿರುವ ರಾಧಿಕ್ ಪಂಡಿತ್ ಅವರನ್ನು ಮತ್ತೆ ತೆರೆ ಮೇಲೆ ನೋಡಲು ಫ್ಯಾನ್ಸ್ ಕಾತುರದಿಂದ ಕಾಯ್ತಿದ್ದಾರೆ. ಮೊಗ್ಗಿನ ಮನಸ್ಸು ಚಿತ್ರದ ಮೂಲಕ ನಾಯಕಿಯಾಗಿ ಕನ್ನಡ ಸಿನಿಮಾ ಇಂಡಸ್ಟ್ರಿಗೆ ನಟಿ ರಾಧಿಕಾ ಪಂಡಿತ್ ಎಂಟ್ರಿ ಕೊಟ್ಟಿದ್ದು, ಅನೇಕ ಸಿನಿಮಾಗಳಲ್ಲಿ ನಟಿ ಸೈ ಎನಿಸಿಕೊಂಡಿದ್ದಾರೆ. ಈಗ ಮತ್ತೆ ಸಿನಿಮಾಗೆ ರೀ ಎಂಟ್ರಿ ಕೊಡಲು ರಾಧಿಕಾ ಪಂಡಿತ್ ರೆಡಿಯಾಗಿದ್ದಾರೆ. ಮದುವೆಯಾಗಿ ಇಬ್ಬರು ಮಕ್ಕಳ ತಾಯಿಯಾಗಿದ್ದರೂ ರಾಧಿಕ ಫಿಟ್ನೆಸ್ ಕಾಪಾಡಿಕೊಂಡಿದ್ದಾರೆ. ಅತ್ಯುತ್ತಮ ಕಥೆಯುಳ್ಳ ಚಿತ್ರದೊಂದಿಗೆ ರಾಧಿಕಾ ಪಂಡಿತ್ ಮತ್ತೆ ಬೆಳ್ಳಿತೆರೆಗೆ ಬರಲು ಪ್ಲಾನ್ ಮಾಡಿದ್ದಾರೆ. ಕಥೆಗಳನ್ನು ಕೇಳ್ತಿರುವ ರಾಧಿಕಾ ಪಂಡಿತ್. ಸ್ತ್ರಿ ಪ್ರಧಾನ ಪಾತ್ರಗಳ ಮೂಲಕ ಕಮ್ ಬ್ಯಾಕ್ ಮಾಡುವ ಸಾಧ್ಯತೆ ಹೆಚ್ಚಿದೆ ಎನ್ನುವ ಮಾತುಗಳು ಕೇಳಿಬರ್ತಿದೆ.