Sandalwood Update: ತಮ್ಮ ಮುಗ್ಧ ನಟನೆಯ ಮೂಲಕ ಸ್ಯಾಂಡಲ್ವುಡ್ನಲ್ಲಿ ಹೆಸರು ಮಾಡಿರುವ ನಟಿ ಅತಿದಿ ಪ್ರಭುದೇವ, ಮತ್ತೊಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಶೂಟಿಂಗ್ನ ಕೆಲ ಫೋಟೋಗಳು ಇದೀಗ ವೈರಲ್ ಆಗಿದೆ.
ಅದಿತಿ ಪ್ರಭುದೇವ ಕನ್ನಡ ಚಿತ್ರರಂಗದ ಪ್ರತಿಭಾವಂತ ನಟಿ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ವಿಭಿನ್ನ ಕಥಾವಸ್ತುವುಳ್ಳ ಸಿನೆಮಾ ಮೂಲಕ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುವ ಈ ನಟಿ ಇದೀಗ ಮತ್ತೊಂದು ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
2/ 8
ಸದ್ಯ ಅವರ ನಟನೆಯ "ಅಲೆಕ್ಸಾ" ಚಿತ್ರದ ಚಿತ್ರೀಕರಣ ಮುಕ್ತಾಯ ಹಂತದಲ್ಲಿದೆ. ಒಂದು ಹಾಡು ಸೇರಿದಂತೆ ಕೆಲವು ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದೆ ಎಂದು ಚಿತ್ರತಂಡ ತಿಳಿಸಿದೆ.
3/ 8
ನಿರ್ದೇಶಕ ಜೀವಾ ನಿರ್ದೇಶನದ ಈ ಚಿತ್ರಕ್ಕೆ ಇತ್ತೀಚೆಗೆ ಸಾಹಸ ದೃಶ್ಯಗಳ ಶೂಟಿಂಗ್ ಮಾಡಿದ್ದು, ಅತಿದಿ ಪ್ರಭುದೇವ್ ಅದ್ಭುತವಾಗಿ ಫೈಟಿಂಗ್ ಸೀನ್ ಶೂಟ್ ಮಾಡಿದ್ದಾರೆ.
4/ 8
ಅದಿತಿ ಪ್ರಭುದೇವ, ಪವನ್ ತೇಜ್ ಈ ಸಾಹಸ ಸನ್ನಿವೇಶದಲ್ಲಿ ಭಾಗವಹಿಸಿದ್ದು, ಕ್ಲೈಮ್ಯಾಕ್ಸ್ ದೃಶ್ಯ ಅದ್ಬುತವಾಗಿ ಮೂಡಿ ಬಂದಿದೆ ಎನ್ನಲಾಗುತ್ತಿದೆ.
5/ 8
ರಾಮಮೂರ್ತಿ ನಗರದ ಬಳಿ ಖ್ಯಾತ ಸಾಹಸ ನಿರ್ದೇಶಕ ರವಿವರ್ಮ ಸಾಹಸ ಸಂಯೋಜನೆಯಲ್ಲಿ ಭರ್ಜರಿ ಕ್ಲೈಮ್ಯಾಕ್ಸ್ ಸಾಹಸ ಸನ್ನಿವೇಶದ ಚಿತ್ರೀಕರಣ ನಡೆದಿದ್ದು, ಶೂಟಿಂಗ್ ಕೆಲ ಫೋಟೋಗಳು ವೈರಲ್ ಆಗಿದೆ.
6/ 8
ಕಳೆದ 24 ವರ್ಷಗಳಿಂದ ನಿರ್ದೇಶಕ ಜೀವಾ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದು, ಹೆಸರಾಂತ ತಂತ್ರಜ್ಞರ ಜೊತೆ ಕೆಲಸ ಮಾಡಿರುವ ಅನುಭವವನ್ನು ಹೊಂದಿದ್ದಾರೆ. ಪ್ರಜ್ವಲ್ ದೇವರಾಜ್ ಅಭಿನಯದ 25ನೇ ಚಿತ್ರ "ಬುಜಂಗ" ಚಿತ್ರವನ್ನು ಅವರೇ ನಿರ್ದೇಶಿಸಿದ್ದು, ಇದು ಅವರಿಗೆ ಎರಡನೇ ಚಿತ್ರವಾಗಿದೆ.
7/ 8
ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ವಿ.ಚಂದ್ರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಡಾ||ವಿ.ನಾಗೇಂದ್ರಪ್ರಸಾದ್ ಹಾಡುಗಳನ್ನು ಬರೆದಿದ್ದು, ಸಾಯಿಸತೀಶ್ ಛಾಯಾಗ್ರಹಣ ಈ ಚಿತ್ರಕ್ಕಿದೆ.
8/ 8
ಈ ಚಿತ್ರದಲ್ಲಿ ಅದಿತಿ ಪ್ರಭುದೇವ ವಿಶೇಷ ತನಿಖಾಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಪವನ್ ತೇಜ್ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ನಾಗಿಣಿ ಧಾರಾವಾಹಿ ಖ್ಯಾತಿಯ ನಾಗಾರ್ಜುನ್, ಮೇಘಾಶ್ರೀ, ಹನುಮಂತೇಗೌಡ, ಚಂದ್ರಕಲಾ ಮೋಹನ್, ಮಿಮಿಕ್ರಿ ಗೋಪಿ, ಮೈಸೂರು ಮಲ್ಲೇಶ್ ಹಾಗೂ ಮನಮೋಹನ್ ಈ ಚಿತ್ರದಲ್ಲಿದ್ದಾರೆ.