ಕಿರುತೆರೆ ಯುವ ನಟ ಸಂಪತ್ ಜಯರಾಮ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆಫರ್ ಇಲ್ಲದೆ ಕಂಗಾಲಾಗಿದ್ದ ಯುವ ನಟ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
2/ 7
ಸಂಪತ್ ಜಯರಾಮ್ ಅವರಿಗೆ 35 ವರ್ಷ ವಯಸ್ಸಾಗಿತ್ತು. ನೆಲಮಂಗಲದ ಅರಿಶಿನಕುಂಟೆಯಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ನೇಣುಬಿಗಿದುಕೊಂಡು ನಟ ಆತ್ಮಹತ್ಯೆ ಮಾಡಿಕೊಂಡಿದ್ದು, ಅಗ್ನಿಸಾಕ್ಷಿ ಧಾರಾವಾಹಿ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು.
3/ 7
ಕಳೆದ ಒಂದು ವರ್ಷದ ಹಿಂದಷ್ಟೇ ಸಂಪತ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ನೆಲಮಂಗಲ ಟೌನ್ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
4/ 7
ಕನ್ನಡದ ಕೆಲವು ಸಿನಿಮಾ ಮತ್ತು ಸೀರಿಯಲ್ಗಳಲ್ಲಿ ನಟಿಸಿದ್ದ ಸಂಪತ್ ಜಯರಾಮ್ ನಿಧನದ ಸುದ್ದಿ ತಿಳಿದು ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಕಿರುತೆರೆ ಮತ್ತು ಹಿರಿತೆರೆಯಲ್ಲಿ ಸಂಪತ್ ಜಯರಾಮ್ ತೊಡಗಿಕೊಂಡಿದ್ದರು.
5/ 7
ಆದರೆ ಇತ್ತೀಚಿನ ದಿನಗಳಲ್ಲಿ ಸೂಕ್ತ ಅವಕಾಶ ಇಲ್ಲದೇ ಕಂಗಾಲಾಗಿದ್ದರು ಎನ್ನಲಾಗಿದೆ. ಶನಿವಾರ ನೆಲಮಂಗಲದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
6/ 7
ನೆಲಮಂಗಲದ ಆಸ್ಪತ್ರೆಯಿಂದ ಎನ್ಆರ್ ಪುರಕ್ಕೆ ಅವರ ಮೃತದೇಹ ರವಾನೆ ಆಗಲಿದೆ. ಅಗ್ನಿ ಸಾಕ್ಷಿ ಸೀರಿಯಲ್ ತಂಡಕ್ಕೂ ನಟನ ಅಗಲಿಕೆ ಸುದ್ದಿ ಆಘಾತ ಕೊಟ್ಟಿದೆ.
7/ 7
ನಟ ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ವೈಷ್ಣವಿ ಅವರ ಅಣ್ಣ ಆಗಿ ನಟಿಸುತ್ತಿದ್ದರು. ಸೀರಿಯಲ್ ಆರಂಭದಲ್ಲಿ ಇವರ ಪಾತ್ರ ಭಾರೀ ಮೆಚ್ಚುಗೆಗೆ ಪಾತ್ರವಾಯ್ತು.
First published:
17
Serial Actor: ಅಗ್ನಿಸಾಕ್ಷಿ ನಟ ಆತ್ಮಹತ್ಯೆ! ಮದುವೆಯಾಗಿ ಒಂದು ವರ್ಷ ಆಗಿತ್ತಷ್ಟೆ