ಅಕ್ಷಯ್ ಕುಮಾರ್, ರಣವೀರ್ ಸಿಂಗ್, ಅಜಯ್ ದೇವಗನ್ ಹಾಗೂ ಕತ್ರೀನಾ ಕೈಫ್ ನಟನೆಯ ‘ಸೂರ್ಯವಂಶಿ’ ಚಿತ್ರ ಬಾಕ್ಸಾಫೀಸ್ನಲ್ಲಿ ಉತ್ತಮ ಗಳಿಕೆ ಮಾಡಿ ಮುನ್ನುಗ್ಗುತ್ತಿದೆ. ಮೊದಲ ದಿನಕ್ಕಿಂತ ಎರಡನೇ ದಿನದ ಗಳಿಕೆಯಲ್ಲಿ ತುಸು ಇಳಿಕೆ ಕಂಡುಬಂದಿದ್ದರೂ ಕೂಡ, ಒಟ್ಟಾರೆ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.