ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ತಪ್ಪಿತಸ್ಥ ಎಂದು ಸಾಬೀತಾಗಿತ್ತು. ಆದರೆ ಸಲ್ಲು ಸದ್ಯ ಜಾಮೀನಿನ ಮೇಲೆ ಇದ್ದಾರೆ. ಆದರೆ ಆ ಕೃಷ್ಣಮೃಗಗಳನ್ನು ಬಿಷ್ಣೋಯ್ ಸಮುದಾಯವು ಪವಿತ್ರವೆಂದು ಪರಿಗಣಿಸುತ್ತದೆ. ಅದಕ್ಕಾಗಿಯೇ ಲಾರೆನ್ಸ್ ಬಿಷ್ಣೋಯ್ ಸಲ್ಮಾನ್ ಖಾನ್ ಅವರನ್ನು ಟಾರ್ಗೆಟ್ ಮಾಡಿದ್ದು, ಸಲ್ಮಾನ್ ಖಾನ್ ಅವರನ್ನು ಕೊಲೆ ಮಾಡಲು ಪ್ರಯತ್ನಿಸಿದ್ದು ಎಲ್ಲರಿಗೂ ತಿಳಿದ ವಿಚಾರ.
ಇದನ್ನು ನೋಡಿದರೆ ಸಲ್ಮಾನ್ ಖಾನ್ ಅವರು ಬೆದರಿಕೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದು ಸ್ಪಷ್ಟವಾಗಿದೆ. ಇನ್ನು, ಟೊಯೋಟಾ ಲ್ಯಾಂಡ್ ಕ್ರೂಸರ್‌ನ ಈ ಆವೃತ್ತಿಯು ಹೊಸ ಮಾದರಿಯ ಕಾರನ್ನು ಬುಲೇಟ್ ಪ್ರೂಫ್ ಮಾಡಿಸಿದ್ದು, ಇತ್ತೀಚೆಗೆ, ಮುಂಬೈನ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಡ್ರೈವ್‌ವೇನಿಂದ ಈ ಬುಲೆಟ್ ಪ್ರೂಫ್ ವಾಹನ ಹೊರಬರುವುದನ್ನು ಹಲವರು ಗಮನಿಸಿದ್ದಾರೆ ಎಂದು ವರದಿಯಾಗಿದೆ.