ಸಂಜಯ್ ದತ್ ಅವರು ತಮ್ಮ 'ಕೆಜಿಎಫ್ 2' ಚಿತ್ರದಿಂದಾಗಿ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ದೊಡ್ಡ ಮಟ್ಟದಲ್ಲಿ ಸುದ್ದಿಯಲ್ಲಿದ್ದಾರೆ. ಪ್ರಶಾಂತ್ ನೀಲ್ ಮತ್ತು ಯಶ್ ಕಾಂಭಿನೇಷನ್ನ 'ಕೆಜಿಎಫ್ 2' ಬಾಕ್ಸ್ ಆಫೀಸ್ನಲ್ಲಿ ಸದ್ದು ಮಾಡುತ್ತಿದೆ. ಆಕ್ಷನ್ ಡ್ರಾಮಾ ನೋಡಲು ಚಿತ್ರಮಂದಿರಗಳಿಗೆ ಜನರು ಹರಿದು ಬರುತ್ತಿದ್ದು, ಬಾಕ್ಸ್ ಆಫೀಸ್ ಕಲೆಕ್ಷನ್ ಕೂಡ ಭರ್ಜರಿಯಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಸಂಜು ಬಾಬಾ ಚಿತ್ರದ ಪ್ರಚಾರದಲ್ಲಿ ನಿರತರಾಗಿದ್ದ ವೇಳೆ ತಮ್ಮ ಹಿಂದಿನ ದಿನಗಳ ಬಗ್ಗೆ ಮಾತಾನಡಿದ್ದಾರೆ.