ನಟ ಶಾರುಖ್ ಖಾನ್ ಅಭಿನಯದ ಬಹುನಿರೀಕ್ಷಿತ ಪಠಾಣ್ ಸಿನಿಮಾ ನೋಡಲು ಅಭಿಮಾನಿಗಳು ಕಾತುರದಿಂದ ಕಾಯ್ತಾ ಇದ್ದಾರೆ. ಅದಕ್ಕೆ ಬೆಳಗ್ಗೆ 6 ಗಂಟೆಯಿಂದ ಶೋಗಳು ಶುರುವಾಗಲಿವೆ.
2/ 8
ಜನವರಿ 25ರಂದು ಪಠಾಣ್ ಚಿತ್ರ ಬಿಡುಗಡೆಯಾಗುತ್ತಿದೆ. ಶಾರುಖ್ ಖಾನ್ ಬರೋಬ್ಬರಿ 4 ವರ್ಷಗಳ ಬಳಿಕ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದಕ್ಕೆ ಶಾರುಖ್ ಅಭಿನಯ ನೋಡಲು ಫ್ಯಾನ್ಸ್ ಕಾಯ್ತಾ ಇದ್ದಾರೆ.
3/ 8
ಶಾರುಖ್ ಅಭಿಮಾನಿಗಳು ಚಿತ್ರಮಂದಿರದ ಬಳಿ ಹಬ್ಬದ ವಾತಾವರಣ ನಿರ್ಮಿಸುತ್ತಿದ್ದಾರೆ. ನೆಚ್ಚಿನ ನಟ ಕಟೌಟ್ ನಿರ್ಮಿಸಿದ್ದಾರೆ. ಫಸ್ಟ್ ಡೇ ಫಸ್ಟ್ ಶೋ ನೋಡಲು ಕಾತುರರಾಗಿದ್ದಾರೆ.
4/ 8
ಪಠಾನ್ ಸಿನಿಮಾ ನೋಡಲು ಅಭಿಮಾನಿಗಳು ಆಸಕ್ತಿ ತೋರಿಸುತ್ತಿರುವುದರಿಂದ ಮುಂಜಾನೆಯೇ ಶೋ ಆಯೋಜಿಸಲಾಗುತ್ತಿದೆ. ದೆಹಲಿ, ಮುಂಬೈನಲ್ಲಿ 6 ಗಂಟೆ ಶೋಗಳ ಟಿಕೆಟ್ಗಳು ಸೋಲ್ಡ್ ಔಟ್ ಆಗಿವೆ.
5/ 8
ಅದ್ಧೂರಿ ಬಜೆಟ್ನಲ್ಲಿ ಪಠಾಣ್ ಸಿನಿಮಾ ನಿರ್ಮಾಣ ಮಾಡಲಾಗಿದೆ. 250 ಕೋಟಿ ಬಜೆಟ್ನಲ್ಲಿ ನಿರ್ಮಿಸಲಾಗಿರುವ ಈ ಚಿತ್ರ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯಲು ಸಜ್ಜಾಗಿದೆ.
6/ 8
ಸಿದ್ದಾರ್ಥ್ ಆನಂದ್ ಅವರು ಪಠಾಣ್ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಶಾರುಖ್ ಖಾನ್ ಅವರಿಗೆ ನಟಿಯಾಗಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಜಾನ್ ಅಬ್ರಾಹಂ ಅವರು ವಿಲನ್ ಪಾತ್ರ ಮಾಡಿದ್ದಾರೆ.
7/ 8
ಪಠಾಣ್ ಸಿನಿಮಾದ ಬೇಷರಂ ರಂಗ್ ಹಾಡು ವಿವಾದ ಸೃಷ್ಟಿ ಮಾಡಿತ್ತು. ಹಾಡಿನಲ್ಲಿ ಕೇಸರಿ ಬಟ್ಟೆಗೆ ಅವಮಾನ ಮಾಡಲಾಗಿದೆ. ಹಿಂದೂ ಧರ್ಮಕ್ಕೆ ಅಪಮಾನಿಸಿದ್ದಾರೆ ಎಂದು ಹೇಳಲಾಗಿತ್ತು.
8/ 8
ಈ ವಿವಾದ ಆಚೆಗೂ ಶಾರೂಖ್ ಸಿನಿಮಾ ನೋಡಲು ಜನ ಸಿದ್ಧರಾಗಿದ್ದಾರೆ. ಅಭಿಮಾನಿಗಳ ನಿರೀಕ್ಷೆಯಂತೆ ಸಿನಿಮಾ ಇದೆಯಾ? ಬಿಡುಗಡೆ ಆದ ಮೇಲೆ ಎಲ್ಲಾ ಗೊತ್ತಾಗಲಿದೆ.