ನಟ ಚೇತನ್ ಫೆಬ್ರವರಿ 16 ರಂದು ಟ್ವೀಟ್ ಮಾಡಿದ್ದು, ಅದರಲ್ಲಿ ಹಿಜಾಬ್ ವಿಚಾರವನ್ನು ಪ್ರಸ್ತಾಪಿಸುತ್ತಾ ಹೈಕೋರ್ಟ್ ಜಡ್ಜ್ ಒಬ್ಬರ ವಿರುದ್ಧ ಅಕ್ಷೇಪಾರ್ಹ ವ್ಯಾಖ್ಯಾನ ಮಾಡಿದ್ದರು ಎನ್ನಲಾಗಿದೆ. ಇದರ ವಿರುದ್ಧ ಶೇಷಾದ್ರಿಪುರಂ ಪೊಲೀಸರು ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಂಡಿದ್ದರು. ಬಳಿಕ ಐಪಿಸಿ ಸೆಕ್ಷನ್ 505(2) ಮತ್ತು 504 ಅಡಿ ಎಫ್ಐಆರ್ ( FIR – Cr No40/2022) ದಾಖಲಿಸಿದ್ದಾರೆ.
ನಟ ‘ಆ ದಿನಗಳು’ ಚೇತನ್ (Chetan) ಸದಾ ವಿವಾದದ ಮೂಲಕವೇ ಸುದ್ದಿ ಆಗುತ್ತಿರುತ್ತಾರೆ. ಈ ಮೊದಲು ಅವರು ಸಾಕಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದರು. ಫೆಬ್ರವರಿ 22 ನಟ ಚೇತನ್ ಅವರನ್ನು ಶೇಷಾದ್ರಿಪುರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿತ್ತು. ಹೀಗಿರುವಾಗಲೇ ಅವರ ಪತ್ನಿ ಮೇಘಾ ಅವರು ಮಂಗಳವಾರ ರಾತ್ರಿ ಫೇಸ್ಬುಕ್ ಲೈವ್ ಬಂದು ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದರು.