ಸುಕುಮಾರ್ ನಿರ್ದೇಶನದ ಅಲ್ಲು ಅರ್ಜುನ್ ಅಭಿನಯದ ಪುಷ್ಪ ಚಿತ್ರ ದೊಡ್ಡ ಹಿಟ್ ಆಗಿದ್ದು, ಇದೀಗ ನಿರ್ದೇಶಕ ಸುಕುಮಾರ್ ಅದರ ಮುಂದುವರಿದ ಭಾಗದ ಕೆಲಸ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್ ಅಭಿಮಾನಿಗಳು ಪುಷ್ಪ 2 ಚಿತ್ರಕ್ಕಾಗಿ ಕಾಯುತ್ತಿದ್ದಾರೆ. ಪುಷ್ಪ ದಿ ರೈಸ್ ಭಾಗ 1 ಚಿತ್ರವು ತೆಲುಗಿನಲ್ಲಿ ಮಾತ್ರವಲ್ಲದೆ ಅದು ಬಿಡುಗಡೆಯಾದ ಎಲ್ಲಾ ಭಾಷೆಗಳಲ್ಲಿ ಸಂಚಲನವನ್ನು ಸೃಷ್ಟಿಸಿತು.