‘ಪಠಾಣ್’ ಚಿತ್ರದ ‘ಬೇಷರಂ ರಂಗ್’ ಹಾಡಿನಲ್ಲಿ ದೀಪಿಕಾ ಪಡುಕೋಣೆ ಬಿಕಿನಿ ಬಣ್ಣದ ಬಗ್ಗೆ ಶುರುವಾದ ವಿವಾದ ಇನ್ನೂ ನಿಂತಿಲ್ಲ. ಕೇಸರಿ ಬಣ್ಣದ ಬಿಕಿನಿ ಧರಿಸಿರುವ ನಟಿ ವಿವಾದ ಎದುರಿಸುತ್ತಿದ್ದು ಹಲವು ರಾಜಕಾರಣಿಗಳು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಹಾಡಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ನಟಿಯೊಬ್ಬರು ಕೇಸರಿ ಬಣ್ಣದ ಬಿಕಿನಿ ತೊಟ್ಟಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಹಲವು ನಟಿಯರು ಈ ಬಣ್ಣದ ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದಾರೆ.