Dhruva Sarja Marriage: ಧ್ರುವ ಸರ್ಜಾ ಮನೆಯಲ್ಲಿ ಮದುವೆ ಸಂಭ್ರಮ; ಮೆಹಂದಿ ರಂಗಿನಲ್ಲಿ ಮಿಂಚಿದ ಪ್ರೇರಣಾ ಶಂಕರ್

Dhruva Sarja- Prerana Marriage: 'ಅದ್ದೂರಿ' ಸಿನಿಮಾ ಮೂಲಕ ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಟ್ಟ ಧ್ರುವ ಸರ್ಜಾ ಅವರ ಮದುವೆ ಸಂಭ್ರಮ ಜೋರಾಗಿದೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ಬಹುಕಾಲದ ಗೆಳತಿ ಪ್ರೇರಣಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಧ್ರುವ ಸರ್ಜಾ ಇದೀಗ ಹಸೆಮಣೆ ಏರಲು ಸಜ್ಜಾಗಿದ್ದಾರೆ. ನಾಳೆ (ನ. 24) ಜೆ.ಪಿ. ನಗರ 7ನೇ ಫೇಸ್​ನಲ್ಲಿರುವ ಸಂಸ್ಕೃತಿ ಬೃಂದಾವನ ಕನ್ವೆನ್ಷನ್ ಹಾಲ್​ನಲ್ಲಿ ಧ್ರುವ ಸರ್ಜಾ- ಪ್ರೇರಣಾ ಶಂಕರ್ ಮದುವೆ ನಡೆಯಲಿದೆ. ಈಗಾಗಲೇ ಪ್ರೇರಣಾ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನೆರವೇರಿದ್ದು, ಧ್ರುವ ಸರ್ಜಾ, ಮೇಘನಾ ರಾಜ್, ಚಿರಂಜೀವಿ ಸರರ್ಜಾ ಸೇರಿದಂತೆ ಕುಟುಂಬದವರು ಪಾಲ್ಗೊಂಡಿದ್ದರು.

First published: