ರಿಷಬ್ ಶೆಟ್ಟಿ ಭಾಷಣ ಈ ರೀತಿ ಇದೆ. 'ಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕಿಂತ ಹೆಚ್ಚು ಅವಧಿಯಿಂದ ತಳಮಟ್ಟ ದಿಂದ ಕಾರ್ಯನಿರ್ವಹಿಸುತ್ತಿರುವ ಭಾರತದ ಏಕೋಪಾಸ್ ಪ್ರತಿನಿಧಿಯಾಗಿ ನಾನು ಬಂದಿದ್ದೇನೆ. ಪರಿಸರ ಸುಸ್ಥಿರತೆ ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟ-ನಿರ್ದೇಶಕನಾಗಿ, ಪರಿಸರ ಸುಸ್ಥಿರತೆ ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದೇ ನನ್ನ ಉದ್ದೇಶ ಎಂದಿದ್ದಾರೆ.
ಕಾಂತಾರದಂತಹ ಸಿನಿಮಾಗಳು ವಾಸ್ತವವನ್ನು ತೆರೆದಿಡುವ ಜತೆಗೆ ಪರಿಸರದ ಸವಾಲುಗಳನ್ನು ಎದುರಿಸಲು, ಸಮಸ್ಯೆಗಳನ್ನು ಬಗೆಹರಿಸಲು ಜನರಿಗೆ ಸ್ಫೂರ್ತಿ ನೀಡುತ್ತವೆ. ಭಾವನೆಗಳನ್ನು ಜಾಗೃತಗೊಳಿಸಿ, ಪರಿಸರ ರಕ್ಷಣೆಯಲ್ಲಿ ಜನ ತೆರಳುವಂತೆ ಮಾಡುತ್ತವೆ. ಇಂತಹ ಪ್ರಯತ್ನ ಪರಿಶ್ರಮವನ್ನು ಗುರುತಿಸಬೇಕು, ಪ್ರೋತ್ಸಾಹಿಸಬೇಕು ಎಂಬುದಾಗಿ ಕಲಿ ನೆರೆದಿರುವ ಎಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತೇನೆ ಎಂದು ಭಾಷಣ ಮುಗಿಸಿದ್ದಾರೆ.