ಇದೀಗ ತಮನ್ನಾ ಲವ್ನಲ್ಲಿ ಬಿದ್ದಿದ್ದಾರೆ ಎನ್ನುವ ಸುದ್ದಿ ಹರಿದಾಡ್ತಿದೆ. ಮಿಲ್ಕಿ ಬ್ಯೂಟಿ ತಮನ್ನಾ ಮತ್ತು ನಟ ವಿಜಯ್ ವರ್ಮಾಇಬ್ಬರೂ ಡೇಟಿಂಗ್ ಮಾಡ್ತಿದ್ದಾರೆ ಎನ್ನುವ ಸುದ್ದಿ ಹಬ್ಬಿದೆ. ಅಷ್ಟೇ ಅಲ್ಲದೇ ಈ ಲವ್ ಬರ್ಡ್ಸ್ ಮುಂಬೈನ ರಸ್ತೆಯಲ್ಲಿ ಓಡಾಡ್ತಾ ಪಾರ್ಟಿ ಮಾಡ್ತಿದ್ದಾರೆ. ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಫೋಟೋ: ಟ್ವಿಟರ್
ತಮನ್ನಾ ತಮಿಳು, ಹಿಂದಿ, ತೆಲುಗಿನಲ್ಲಿ ನಟಿಸುತ್ತಾ ಬ್ಯುಸಿಯಾಗಿದ್ದಾರೆ. ಕಳೆದ ವರ್ಷ ಲಾಕ್ಡೌನ್ ಸಮಯದಲ್ಲಿ, ತಮನ್ನಾ ಸಿನಿಮಾಗಳಿಗಿಂತ ಹೆಚ್ಚಾಗಿ ವೆಬ್ ಸೀರೀಸ್ನಲ್ಲಿ ಕಾಣಿಸಿಕೊಂಡಿದ್ದರು. ತಮನ್ನಾ ಅವರು ಸುಮಾರು 15 ವರ್ಷ ವಯಸ್ಸಿನವರಾಗಿದ್ದಾಗ ಮೊದಲ ಬಾರಿಗೆ ತೆರೆಯ ಮೇಲೆ ಕಾಣಿಸಿಕೊಂಡರು. 10ನೇ ತರಗತಿ ಓದುತ್ತಿರುವಾಗಲೇ ಸಿನಿಮಾದಲ್ಲಿ ಮೊದಲು ನಟಿಸಿದ್ದರು. (ಕೃಪೆ: Instagram)