ನನ್ನ ಆತನ ಜೊತೆಗಿನ ಸಂಬಂಧ ಈ ಜನ್ಮಕ್ಕೆ ದೇವರು ಕೊಟ್ಟ ವರವೇ ಇರಬೇಕು. ನಾ ನಕ್ಕಾಗ ನಕ್ಕು, ಅತ್ತಾಗ ಅತ್ತು, ನನ್ನನ್ನು ನಿಮಗೆ ಅದ್ಭುತವಾಗಿ ತೋರಿಸಿದ ಆ ಸಲುಗೆಗೆ ಅದಾವ ಕಣ್ಣು ತಗುಲಿತ್ತೊ. 6ತಿಂಗಳ ಕಾಲ ದೂರಾಗಿ ಈಗ ಎದುರಾಗಿದ್ದೇವೆ. ಆತ ಬೇರಾರಲ್ಲ ಬದುಕಿನ ಭಾಗ "ಕ್ಯಾಮೆರಾ" ಎಂದು ಗಣೇಶ್ ಸಿನಿಮಾ ಚಿತ್ರೀಕರಣ ಮತ್ತೆ ಆರಂಭಿಸಿರುವ ಕುರಿತು ಭಾವುಕರಾಗಿ ಬರೆದುಕೊಂಡಿದ್ದಾರೆ. "ತ್ರಿಬಲ್ ರೈಡಿಂಗ್" ಚಿತ್ರೀಕರಣ ಶುರು ನಿಮ್ಮ ಹಾರೈಕೆಯಿರಲಿ