ಸೂರ್ಯವಂಶ: ಎಸ್ ನಾರಾಯಣ್ ನಿರ್ದೇಶನದಲ್ಲಿ ಮೂಡಿಬಂದ ಸೂರ್ಯವಂಶ ಚಿತ್ರದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ದ್ವಿಪಾತ್ರದಲ್ಲಿ ನಟಿಸಿದ್ದರು. ಇದು 1997 ರಲ್ಲಿ ತಮಿಳಿನಲ್ಲಿ ತೆರೆಕಂಡಿದ್ದ ಸೂರ್ಯವಂಶಂ ಚಿತ್ರದ ರಿಮೇಕ್. ಅಭೂತಪೂರ್ವ ಪ್ರದರ್ಶನ ಕಂಡ ಈ ಚಿತ್ರ ಬಾಕ್ಸಾಫೀಸಿನಲ್ಲಿ ಸುಮಾರು 20 ಕೋಟಿ ಗಳಿಕೆ ಕಂಡಿತು. ತಂದೆ-ಮಗನ ಬಾಂಧವ್ಯದ ಕಥೆಯಿರುವ ಈ ಸಿನಿಮಾದಲ್ಲಿ ವಿಷ್ಣು ವರ್ಧನ್ ದ್ವಿಪಾತ್ರದಲ್ಲಿ ಅಭಿನಯಿಸಿದ್ದರು.