Sridevi-Janhvi Kapoor: ಅಮ್ಮ ಶ್ರೀದೇವಿಯ ಅಪರೂಪದ ಫೋಟೋಗಳನ್ನು ಹಂಚಿಕೊಂಡ ಜಾಹ್ನವಿ ಕಪೂರ್..!
ಶ್ರೀದೇವಿ ಅವರ ಮಗಳು ಜಾಹ್ನವಿ ಕಪೂರ್ ಸದ್ಯ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾಗಳಲ್ಲಿ ಎಷ್ಟೇ ಬ್ಯುಸಿಯಾಗಿದ್ದರೂ ಅಮ್ಮನ ಅಗಲಿಕೆಯ ನೋವಿನಿಂದ ಇನ್ನೂ ಹೊರ ಬಂದಿಲ್ಲ. ಅಮ್ಮ ಇಲ್ಲದ ನೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಅಮ್ಮಂದಿರ ದಿನದಂದು ಜಾಹ್ನವಿ, ಶ್ರೀದೇವಿ ಅವರ ಕೆಲವು ಅಪರೂಪದ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. (ಚಿತ್ರಗಳು ಕೃಪೆ: ಜಾಹ್ನವಿ ಕಪೂರ್ ಇನ್ಸ್ಟಾಗ್ರಾಂ ಖಾತೆ)