ಶಂಕರ್ ನಿರ್ದೇಶನದ ಕಮಲ್ ಹಾಸನ್ ಅಭಿನಯದ ಇಂಡಿಯನ್ 2 ಚಿತ್ರದಲ್ಲಿ ಕಾಜಲ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಶುರುವಾಗಿ ನಂತರ ಚಿತ್ರೀಕರಣ ನಿಂತಿತು. ಈ ಸಿನಿಮಾ ಸೆಟ್ಟೇರಿದಾಗಿನಿಂದಲೂ ಒಂದಲ್ಲ ಒಂದು ರೂಪದಲ್ಲಿ ಸಮಸ್ಯೆಗಳು ಎದುರಾಗಿ ಸಿನಿಮಾ ಇನ್ನೂ ಪೂರ್ಣಗೊಂಡಿಲ್ಲ. ಈ ಚಿತ್ರದ ಒಂದು ಭಾಗದ ಚಿತ್ರೀಕರಣದ ನಂತರ ಸೆಟ್ನಲ್ಲಿ ಅಪಘಾತ ಸಂಭವಿಸಿದೆ. ನಂತರ ನಟ ವಿವೇಕ್ ಸಾವು ಸಂಭವಿಸಿತು. ಇದರೊಂದಿಗೆ ನಿರ್ದೇಶಕ ಶಂಕರ್ ಮತ್ತು ಲೈಕಾ ಪ್ರೊಡಕ್ಷನ್ಸ್ ನಡುವೆ ಭಿನ್ನಾಭಿಪ್ರಾಯಗಳಿವೆ.