Rishab Shetty: ಫ್ಯಾಮಿಲಿ ಸಮೇತ ಧರ್ಮಸ್ಥಳಕ್ಕೆ ರಿಷಬ್ ಶೆಟ್ಟಿ ಭೇಟಿ, ಧರ್ಮಾಧಿಕಾರಿಗಳ ಆಶೀರ್ವಾದ ಪಡೆದ ದಂಪತಿ

ಕನ್ನಡದಲ್ಲಿ ಕಾಂತಾರ ಸಿನಿಮಾ ಮೂಲಕ ಕಮಾಲ್ ಮಾಡಿದ ನಟ ರಿಷಬ್ ಶೆಟ್ಟಿ ಇದೀಗ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕುಟುಂಬ ಸಮೇತರಾಗಿ ಆಗಮಿಸಿ ಮಂಜುನಾಥನ ದರ್ಶನ ಪಡೆದಿದ್ದಾರೆ.

First published:

 • 18

  Rishab Shetty: ಫ್ಯಾಮಿಲಿ ಸಮೇತ ಧರ್ಮಸ್ಥಳಕ್ಕೆ ರಿಷಬ್ ಶೆಟ್ಟಿ ಭೇಟಿ, ಧರ್ಮಾಧಿಕಾರಿಗಳ ಆಶೀರ್ವಾದ ಪಡೆದ ದಂಪತಿ

  ಕಾಂತಾರ ಸಿನಿಮಾ ಯಶಸ್ಸಿನ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ರಿಷಬ್ ಶೆಟ್ಟಿ,  ಧರ್ಮಸ್ಥಳಕ್ಕೆ  ಭೇಟಿ ನೀಡಿದ್ರು. ಪತ್ನಿ ಪ್ರಗತಿ ಶೆಟ್ಟಿ ಹಾಗೂ ಮಕ್ಕಳ ಜೊತೆ ಆಗಮಿಸಿದ ರಿಷಬ್​, ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

  MORE
  GALLERIES

 • 28

  Rishab Shetty: ಫ್ಯಾಮಿಲಿ ಸಮೇತ ಧರ್ಮಸ್ಥಳಕ್ಕೆ ರಿಷಬ್ ಶೆಟ್ಟಿ ಭೇಟಿ, ಧರ್ಮಾಧಿಕಾರಿಗಳ ಆಶೀರ್ವಾದ ಪಡೆದ ದಂಪತಿ

  ರಿಷಬ್ ದಂಪತಿ ಮಂಜುನಾಥನ ದರ್ಶನ ಪಡೆದ ಬಳಿಕ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿದ್ದರು. ಧರ್ಮಾಧಿಕಾರಿಗಳ ಆಶೀವಾರ್ದ ಪಡೆದ ದಂಪತಿ ಅವರ ಜೊತೆ ಕೆಲ ಕಾಲ ಮಾತುಕತೆ ನಡೆಸಿದ್ದರು.

  MORE
  GALLERIES

 • 38

  Rishab Shetty: ಫ್ಯಾಮಿಲಿ ಸಮೇತ ಧರ್ಮಸ್ಥಳಕ್ಕೆ ರಿಷಬ್ ಶೆಟ್ಟಿ ಭೇಟಿ, ಧರ್ಮಾಧಿಕಾರಿಗಳ ಆಶೀರ್ವಾದ ಪಡೆದ ದಂಪತಿ

  ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ರಿಷಬ್ ಶೆಟ್ಟಿ ಮಕ್ಕಳಿಗೆ ಉಡುಗೊರೆಯನ್ನು ನೀಡಿದ್ದಾರೆ. ಆಟದ ವಸ್ತುಗಳನ್ನು ನೀಡಿದ್ರು. ರಿಷಬ್​ ಪುತ್ರಿ ಪುಟಾಣಿ ರಾಧ್ಯಾಗೆ ಪುಟ್ಟ ಪುಟ್ಟ ಗೊಂಬೆಗಳನ್ನು ನೀಡಿದ್ರು.

  MORE
  GALLERIES

 • 48

  Rishab Shetty: ಫ್ಯಾಮಿಲಿ ಸಮೇತ ಧರ್ಮಸ್ಥಳಕ್ಕೆ ರಿಷಬ್ ಶೆಟ್ಟಿ ಭೇಟಿ, ಧರ್ಮಾಧಿಕಾರಿಗಳ ಆಶೀರ್ವಾದ ಪಡೆದ ದಂಪತಿ

  ಧರ್ಮಸ್ಥಳಕ್ಕೆ ಭೇಟಿ ನೀಡಿದ ಫೋಟೋಗಳನ್ನು ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಕುಟುಂಬ ಸಮೇತರಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಹಾಗು ಕುಕ್ಕೆಗೆ ಭೇಟಿ ನೀಡಿ ದೇವರ ದರ್ಶನದ ಜೊತೆ ಧರ್ಮಾಧಿಕಾರಿಗಳಿಂದ ಆಶೀರ್ವಾದವನ್ನು ಪಡೆದೆವು ಎಂದು ಬರೆದುಕೊಂಡಿದ್ದಾರೆ.

  MORE
  GALLERIES

 • 58

  Rishab Shetty: ಫ್ಯಾಮಿಲಿ ಸಮೇತ ಧರ್ಮಸ್ಥಳಕ್ಕೆ ರಿಷಬ್ ಶೆಟ್ಟಿ ಭೇಟಿ, ಧರ್ಮಾಧಿಕಾರಿಗಳ ಆಶೀರ್ವಾದ ಪಡೆದ ದಂಪತಿ

  ಧರ್ಮಸ್ಥಳ ಬಳಿಕ ರಿಷಬ್ ದಂಪತಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೂ ಭೇಟಿ ನೀಡಿದ್ರು. ಮಕ್ಕಳಿಗೆ ಮುಡಿ ಕೊಟ್ಟು ದಂಪತಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇಗುಲಕ್ಕೆ ಭೇಟಿ ನೀಡಿದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

  MORE
  GALLERIES

 • 68

  Rishab Shetty: ಫ್ಯಾಮಿಲಿ ಸಮೇತ ಧರ್ಮಸ್ಥಳಕ್ಕೆ ರಿಷಬ್ ಶೆಟ್ಟಿ ಭೇಟಿ, ಧರ್ಮಾಧಿಕಾರಿಗಳ ಆಶೀರ್ವಾದ ಪಡೆದ ದಂಪತಿ

  ನಟ, ನಿರ್ದೇಶಕ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಕೂಡ ಇತ್ತೀಚಿಗೆ ಸಖತ್ ಸುದ್ದಿಯಲ್ಲಿದ್ದಾರೆ. ಸಿನಿಮಾ ರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಪ್ರಗತಿ ಕೂಡ ರಿಷಬ್ ಶೆಟ್ಟಿಯ ಅನೇಕ ಸಿನಿಮಾಗಳಿಗೆ ಅವರೇ ಕಾಸ್ಟ್ಯೂಮ್ ಡಿಸೈನರ್ ಆಗಿದ್ದಾರೆ.

  MORE
  GALLERIES

 • 78

  Rishab Shetty: ಫ್ಯಾಮಿಲಿ ಸಮೇತ ಧರ್ಮಸ್ಥಳಕ್ಕೆ ರಿಷಬ್ ಶೆಟ್ಟಿ ಭೇಟಿ, ಧರ್ಮಾಧಿಕಾರಿಗಳ ಆಶೀರ್ವಾದ ಪಡೆದ ದಂಪತಿ

  2017ರಲ್ಲಿ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಕುಂದಾಪುರದಲ್ಲಿ ಪ್ರಗತಿ-ರಿಷಬ್ ಮದುವೆ ಅದ್ಧೂರಿಯಾಗಿ ನಡೆಯಿತು. ಈ ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ.

  MORE
  GALLERIES

 • 88

  Rishab Shetty: ಫ್ಯಾಮಿಲಿ ಸಮೇತ ಧರ್ಮಸ್ಥಳಕ್ಕೆ ರಿಷಬ್ ಶೆಟ್ಟಿ ಭೇಟಿ, ಧರ್ಮಾಧಿಕಾರಿಗಳ ಆಶೀರ್ವಾದ ಪಡೆದ ದಂಪತಿ

  ನಟ ರಿಷಬ್ ಶೆಟ್ಟಿ ಕಾಂತಾರ 2 ಸಿನಿಮಾ ಸ್ಕ್ರಿಪ್ಟಿಂಗ್ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ರಿಷಬ್ ಶೆಟ್ಟಿ ಸಿನಿಮಾಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

  MORE
  GALLERIES