ತೆಲಂಗಾಣದ ಸಿಂಗರೇಣಿ ಪ್ರದೇಶದ ಕಾಲ್ಪನಿಕ ಹಳ್ಳಿಯ ಹಿನ್ನೆಲೆಯಲ್ಲಿ ಚಿತ್ರವನ್ನು ಪ್ರೇಕ್ಷಕರ ಮುಂದೆ ತರಲಾಗುತ್ತಿದೆ. ತೆಲುಗು, ಹಿಂದಿ, ತಮಿಳು, ಮಲಯಾಳಂ ಮತ್ತು ಕನ್ನಡ ಭಾಷೆಗಳಲ್ಲಿ ಈ ದಸರಾ ಚಿತ್ರ ಬಿಡುಗಡೆಯಾಗಲಿದೆ ಎಂಬುದು ವಿಶೇಷ. ನಾನಿ ಅಭಿಮಾನಿಗಳು ಈ ಸಿನಿಮಾದ ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿದ್ದಾರೆ.