Kantara Varaha Roopam Song: ವರಾಹ ರೂಪಂ ಹಾಡಿಗೆ ಮತ್ತೆ ತಡೆ! ಕಾಂತಾರ ತಂಡಕ್ಕೆ ಕೇರಳ ಹೈಕೋರ್ಟ್ ನೋಟಿಸ್
ಕಾಂತಾರ ಸಿನಿಮಾದಲ್ಲಿ ಮತ್ತೆ 'ವರಾಹ ರೂಪಂ' ಹಾಡನ್ನು ಕೇಳಬಹುದು ಎಂದುಕೊಂಡಿದ್ದವರಿಗೆ ನಿರಾಶೆಯಾಗಿದೆ. ಕಾಂತಾರಕ್ಕೆ ಮತ್ತೆ ಶಾಕ್ ಎದುರಾಗಿದೆ. ಥೈಕ್ಕುಡಂ ಬ್ರಿಡ್ಜ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ಕೇರಳ ಹೈಕೋರ್ಟ್ ತಡೆ ನೀಡಿದೆ.
ಕಾಂತಾರ ಸಿನಿಮಾ ಮತ್ತೆ ಸದ್ದು ಮಾಡುತ್ತಿದೆ. ಸಿನಿಮಾದಲ್ಲಿ ವರಾಹ ರೂಪಂ ಎಂಬ ಹಾಡು ಸಖತ್ ಹಿಟ್ ಆಗಿತ್ತು. ಸಿನಿಮಾ ಮುಗಿದ ಮೇಲೂ ಪ್ರೇಕ್ಷಕರ ನಾಲಿಗೆ ಮೇಲೆ ನಲಿಯುತ್ತಾ ಇತ್ತು. ಆದರೆ ಆ ಹಾಡು ಮಲಯಾಳಂ ಹಾಡಿನ ನಕಲು ಎಂಬ ಆರೋಪ ಕೇಳಿ ಬಂದಿತ್ತು.
2/ 7
ಈ ಹಾಡನ್ನು ಕಾಂತಾರ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಮಲಯಾಳಂ ಭಾಷೆಯ ‘ನವರಸಂ..’ ಹಾಡಿನಿಂದ ಇದನ್ನು ಕಾಪಿ ಮಾಡಿದ್ದಾರೆ ಎಂಬ ಆರೋಪ ಎದುರಾಗಿತ್ತು. ಈ ಸಂಬಂಧ ಮಲಯಾಳಂನ ‘ತೈಕ್ಕುಡಂ ಬ್ರಿಡ್ಜ್’ ಚಿತ್ರತಂಡ ಕೋರ್ಟ್ ಮೆಟ್ಟಿಲೇರಿತ್ತು.
3/ 7
ಈ ಕುರಿತು ವಿಚಾರಣೆ ನಡೆಸಿದ್ದ ಕೇರಳದ ಪಾಲಕ್ಕಾಡ್ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ವರಹಾ ರೂಪಂ ಹಾಡಿಗೆ ತಡೆಯಾಜ್ಞೆ ನೀಡಿತ್ತು. ಇದಾದ ಬಳಿಕ ಮತ್ತೊಮ್ಮೆ ಕೋರ್ಟ್ನಲ್ಲಿ ವಿಚಾರಣೆ ನಡೆದಿತ್ತು.
4/ 7
ಕೆಳ ನ್ಯಾಯಾಲಯವು ಎರಡೂ ಕಡೆಯವರ ವಾದ ಆಲಿಸಿದ ಬಳಿಕ ಥೈಕ್ಕುಡಂ ಬ್ರಿಡ್ಸ್ ಅರ್ಜಿಯನ್ನು ವಜಾಗೊಳಿಸಿದೆ ಹಾಗೂ ವರಾಹರೂಪಂ ಹಾಡಿಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ತೆರವು ಮಾಡಿತ್ತು.
5/ 7
ಇದೀಗ ಮತ್ತೊಮ್ಮೆ ಕಾಂತಾರಕ್ಕೆ ಶಾಕ್ ಎದುರಾಗಿದೆ. ಥೈಕ್ಕುಡಂ ಬ್ರಿಡ್ಜ್ ಅರ್ಜಿಯನ್ನು ವಜಾಗೊಳಿಸಿದ್ದ ಕೇರಳದ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ಕೇರಳ ಹೈಕೋರ್ಟ್ ತಡೆ ನೀಡಿದೆ.
6/ 7
ಸೆಷನ್ಸ್ ಆದೇಶವನ್ನು ಪ್ರಶ್ನಿಸಿ ಥೈಕುಡಂ ಬ್ರಿಡ್ಜ್ ಹೈಕೋರ್ಟ್ನಲ್ಲಿ ದಾವೆ ಹೂಡಿತ್ತು. ಇದೀಗ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯ ಆದೇಶಕ್ಕೆ ಕೇರಳ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
7/ 7
ಹೊಂಬಾಳೆ ಬ್ಯಾನರ್, ರಿಷಬ್ ಶೆಟ್ಟಿ, ಪೃಥ್ವಿರಾಜ್ ಫಿಲ್ಮ್ಸ್, ಅಮೆಜಾನ್ ಸೆಲ್ಲರ್ ಸರ್ವೀಸ್ ಪ್ರೈವೇಟ್ ಲಿಮಿಟೆಡ್, ಗೂಗಲ್ ಇಂಡಿಯಾ ಹೆಡ್ ಆಫೀಸ್, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಇತರರಿಗೆ ಕೇರಳ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.