Celebrities Celebrate New Year 2022: ವಾವ್ಹ್..ಎಷ್ಟು ಕ್ಯೂಟ್ ಆಗಿ ಹೊಸ ವರ್ಷಕ್ಕೆ ವಿಶ್ ಮಾಡಿದ್ದಾರೆ ನೋಡಿ ಈ ಸೆಲೆಬ್ರೆಟಿಗಳು!
Celebrities Celebrate New Year 2022: 2021 ಕಳೆದು 2022 ಬಂದಿದೆ. ಕಳೆದ ವರ್ಷದ ಕಹಿ ಘಟನೆಗಳನ್ನು ಮರೆತು ಹೊಸ ವರ್ಷಕ್ಕೆ ಕಾಲಿಟ್ಟಿದ್ದೇವೆ. ಈ ನಡುವೆ ಬಾಲಿವುಡ್ ಸೆಲೆಬ್ರೆಟಿಗಳು ಹೊಸ ವರ್ಷವನ್ನು ತಮ್ಮದೇ ಸ್ಟೈಲ್ನಲ್ಲಿ ಬರಮಾಡಿಕೊಂಡಿದ್ದಾರೆ. ಹಾಗಿದ್ರೆ ಯಾವ ಸೆಲೆಬ್ರೆಟಿ ಹೇಗೆ ಹೊಸ ವರ್ಷವನ್ನು ವೆಲ್ಕಮ್ ಮಾಡಿದ್ದಾರೆ ಇಲ್ಲಿದೆ ನೋಡಿ..
ಸದ್ಯ ಅರ್ಜುನ್ ಕಪೂರ್ ಹೋಂ ಐಸೋಲೇಷನ್ನಲ್ಲಿದ್ದಾರೆ. ಆದರೆ, ಮಲೈಕಾ ಅರೋರಾ ಮಾತ್ರ ಇಬ್ಬರು ಒಟ್ಟಿಗೆ ಇರುವ ಫೋಟೋವನ್ನು ಪೋಸ್ಟ್ ಮಾಡಿ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. ಐ ಮಿಸ್ ಯೂ ಎಂದು ಅರ್ಜುನ್ ಕಪೂರ್ ಅವರನ್ನು ಮಿಸ್ ಮಾಡಿಕೊಂಡಿದ್ದಾರೆ.
2/ 8
ಬಾಲಿವುಡ್ನ ಕ್ಯೂಟ್ ಕಪಲ್ ಆಲಿಯಾ ಭಟ್, ರಣಬೀರ್ ಕಪೂರ್ ಕೂಡ ಒಟ್ಟಿಗೆ ಹೊಸ ವರ್ಷ ಆಚರಿಸಿದ್ದಾರೆ. ಆಲಿಯಾ ಭಟ್ ಒಂದಿಷ್ಟು ಫೋಟೋಗಳನ್ನು ಶೇರ್ ಮಾಡಿಕೊಂಡು ವಿಶ್ ಮಾಡಿದ್ದಾರೆ.
3/ 8
ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಜೋಡಿ ಕೂಡ ಹೊಸ ವರ್ಷ ಆಚರಿಸಿದ್ದಾರೆ. ಇಬ್ಬರು ಒಟ್ಟಿಗೆ ಇರುವ ಫೋಟೋವನ್ನು ಶೇರ್ ಮಾಡಿಕೊಂಡು ಹ್ಯಾಪಿ ನ್ಯೂ ಇಯರ್ ಎಂದು ವಿಶ್ ಮಾಡಿದ್ದಾರೆ, ಈ ಫೋಟೋಗಳು ಸಖತ್ ವೈರಲ್ ಆಗುತ್ತಿದೆ.
4/ 8
ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಕೂಡ ಹೊಸ ವರ್ಷಾಚರಣೆ ಸಂಭ್ರಮಿಸುವ ಮೊದಲಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳು ಕೂಡ ಸಖತ್ ಕ್ಯೂಟ್ ಆಗಿವೆ.
5/ 8
ಪ್ರಿಯಾಂಕ ಚೋಪ್ರಾ ಹಾಗೂ ನಿಕ್ ಜೋನಸ್ ಜೋಡಿ ಕಿಸ್ ಮಾಡುತ್ತಿರುವ ಫೋಟೋಗಳನ್ನು ಹಂಚಿ ಕೊಳ್ಳುವ ಮೂಲಕ ಹೊಸ ವರ್ಷದ ವಿಶ್ ಮಾಡಿದ್ದಾರೆ.
6/ 8
ಸೋನಂ ಕಪೂರ್ ಪತಿ ಆನಂದ್ ಅಹುಜಾ ಅವರೊಂದಿಗೆ ಕಿಸ್ ಮಾಡುತ್ತಿರುವ ಫೋಟೋವೊಂದನ್ನು ಶೇರ್ ಮಾಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
7/ 8
ಶಾಹಿದ್ ಕಪೂರ್ ಪತ್ನಿ ಮೀರಾ ರಜಪೂತ್ ಜೊತೆ ಮುದ್ದಾದ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋ ಕಂಡು ನೆಟ್ಟಿಗರು ಫಿದಾ ಆಗಿದ್ದಾರೆ. ಈ ಜೋಡಿಗೆ ನೆಟ್ಟಿಗರು ಶುಭಾಶಯ ತಿಳಿಸಿದ್ದಾರೆ.
8/ 8
ಅಕ್ಷಯ್ ಕುಮಾರ್ ಮತ್ತು ಟ್ವಿಂಕಲ್ ಖನ್ನಾ ಜೊತೆ ರಜೆಯನ್ನು ಒಟ್ಟಿಗೆ ಕಳೆಯುತ್ತಿದ್ದಾರೆ. ಇವರಿಬ್ಬರು ಮಾಲ್ಡೀವ್ಸ್ನಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ.