1972ರಲ್ಲಿ ಸಿನಿಮಾ ರಂಗಕ್ಕೆ ಇನ್ನೋಸೆಂಟ್ ಕಾಲಿಟ್ಟರು. ನಂತರ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. 1986ರಲ್ಲಿ ಅವರು 30ಕ್ಕೂ ಅಧಿಕ ಚಿತ್ರಗಳಲ್ಲಿ ಕಾಣಿಸಿಕೊಂಡರು. 1989ರಲ್ಲಿ ತೆರೆಗೆ ಬಂದ ‘ರಾಮ್ಜಿ ರಾವ್ ಸ್ಪೀಕಿಂಗ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ಮೂಲಕ ಅವರಿಗೆ ಹೆಚ್ಚು ಜನಪ್ರಿಯತೆ ಪಡೆದರು.