ಒಂದೆಡೆ ಕಮರ್ಷಿಯಲ್ ಸಿನಿಮಾಗಳನ್ನು ಮಾಡಿಕೊಂಡು ಇತ್ತ ನಾಯಕಿ ಪ್ರಧಾನ ಸಿನಿಮಾಗಳಲ್ಲೂ ಕೀರ್ತಿ ಸುರೇಶ್ ನಟಿಸುತ್ತಿದ್ದಾರೆ. ರಜನಿಕಾಂತ್ ನಾಯಕನಾಗಿ ನಟಿಸಿರುವ ಅಣ್ಣಾತೈ ಚಿತ್ರದಲ್ಲಿ ರಜನಿ ತಂಗಿ ಪಾತ್ರದಲ್ಲಿ ನಟಿಸಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ನಾಯಕನಾಗಿ ನಟಿಸುತ್ತಿರುವ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅವರ ತಂಗಿಯಾಗಿ ನಟಿಸುತ್ತಿರುವುದು ವಿಶೇಷ. ಇತ್ತೀಚೆಗಷ್ಟೇ ಮಹೇಶ್ ಬಾಬು ಅಭಿನಯದ 'ಸರ್ಕಾರು ವಾರಿ ಪಟ' ಚಿತ್ರ ಭರ್ಜರಿ ಯಶಸ್ಸು ಕಂಡಿತ್ತು.