ಇದೆ ವೇಳೆ ನಟ ರಿಚರ್ಡ್ ಗೇರ್, ಶಿಲ್ಪಾ ಶೆಟ್ಟಿಯನ್ನು ವೇದಿಕೆ ಮೇಲೆಯೇ ಎಳೆದು ಮುತ್ತುಕೊಟ್ಟಿದ್ದರು. ರಿಚರ್ಡ್ನ ಮುತ್ತಿನಿಂದ ತಪ್ಪಿಸಿಕೊಳ್ಳಲು ಶಿಲ್ಪಾ ಪ್ರಯತ್ನ ಪಟ್ಟಿದ್ದರಾದರೂ ರಿಚರ್ಡ್ ಬಲವಂತವಾಗಿ ಶಿಲ್ಪಾ ಶೆಟ್ಟಿಗೆ ಮುತ್ತು ಕೊಟ್ಟಿದ್ದರು.
ಬಾಲಿವುಡ್(Bollywood) ನಟಿ ಶಿಲ್ಪಾ ಶೆಟ್ಟಿ(Shilpa Shetty) ಅವರಿಗೆ 2007ರಲ್ಲಿ ನಡೆದ ಒಂದು ಘಟನೆಯ ಪ್ರಕರಣದಲ್ಲಿ ಕೊನೆಗೂ ರಿಲೀಫ್ ಸಿಕ್ಕಿದೆ. 2007ರಲ್ಲಿ ರಾಜಸ್ಥಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಾಲಿವುಡ್ ನಟ ರಿಚರ್ಡ್ ಗೇರ್ ನಟಿ ಶಿಲ್ಪಾ ಶೆಟ್ಟಿಯನ್ನು ವೇದಿಕೆಯಲ್ಲಿಯೇ ಕಿಸ್ ಮಾಡಿದ್ದರು.
2/ 7
2007ರ ಏಪ್ರಿಲ್ 15ರಂದು ಹಾಲಿವುಡ್ ನಟ ರಿಚರ್ಡ್ ಗೇರ್ ಭಾರತಕ್ಕೆ ಬಂದಿದ್ದರು. ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮವೊಂದನ್ನು ರಾಜಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಿಚರ್ಡ್ ಗೇರ್ ಜೊತೆಗೆ ನಟಿ ಶಿಲ್ಪಾ ಶೆಟ್ಟಿ ಸಹ ಭಾಗವಹಿಸಿದ್ದರು.
3/ 7
ಇದೆ ವೇಳೆ ನಟ ರಿಚರ್ಡ್ ಗೇರ್, ಶಿಲ್ಪಾ ಶೆಟ್ಟಿಯನ್ನು ವೇದಿಕೆ ಮೇಲೆಯೇ ಎಳೆದು ಮುತ್ತುಕೊಟ್ಟಿದ್ದರು. ರಿಚರ್ಡ್ನ ಮುತ್ತಿನಿಂದ ತಪ್ಪಿಸಿಕೊಳ್ಳಲು ಶಿಲ್ಪಾ ಪ್ರಯತ್ನ ಪಟ್ಟಿದ್ದರಾದರೂ ರಿಚರ್ಡ್ ಬಲವಂತವಾಗಿ ಶಿಲ್ಪಾ ಶೆಟ್ಟಿಗೆ ಮುತ್ತು ಕೊಟ್ಟಿದ್ದರು.
4/ 7
ಇದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಶಿಲ್ಪಾ ಶೆಟ್ಟಿ ಹಾಗೂ ರಿಚರ್ಡ್ ಗೇರ್ ವಿರುದ್ಧ ಸಾರ್ವಜನಿಕ ಕೆಟ್ಟ ವರ್ತನೆ, ಅಶ್ಲೀಲತೆ ಪ್ರಕರಣ ದಾಖಲಿಸಲಾಗಿತ್ತು.
5/ 7
ಶಿಲ್ಪಾ ಹಾಗೂ ರಿಚರ್ಡ್ ಗೇರ್ ವಿರುದ್ಧ ಬಂಧನದ ವಾರೆಂಟ್ ಸಹ ಹೊರಡಿಸಲಾಗಿತ್ತು. ಬಳಿಕ ಸುಪ್ರೀಂಕೋರ್ಟ್ ವಾರೆಂಟ್ ಅನ್ನು ರದ್ದು ಪಡಿಸಿತು.
6/ 7
ಪ್ರಕರಣದ ವಿಚಾರಣೆ ನಡೆಸಿದ ಮೆಟ್ರೊಪಾಲಿಟೆನ್ ಮ್ಯಾಜಿಸ್ಟ್ರೇಟ್ ಕೇತನ್ ಚೌವ್ಹಾನ್ ಶಿಲ್ಪಾ ಶೆಟ್ಟಿ ಈ ಪ್ರಕರಣದಲ್ಲಿ ಆರೋಪಿ ಅಲ್ಲ ಬದಲಿಗೆ ಮೊದಲ ಆರೋಪಿ ಆಗಿರುವ ರಿಚರ್ಡ್ ಗೇರ್ನ ವರ್ತನೆಯಿಂದ ಸಂತ್ರಸ್ತೆ ಆಗಿದ್ದಾರೆ ಎಂದಿದ್ದಾರೆ.
7/ 7
ಕಳೆದ ವರ್ಷ ತನ್ನ ಪತಿ ರಾಜ್ ಕುಂದ್ರಾ ಅವರನ್ನು ಅಶ್ಲೀಲ ಚಿತ್ರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿಸಿದ ನಂತರ ಶಿಲ್ಪಾ ಸುದ್ದಿಯಲ್ಲಿದ್ದರು. ಸದ್ಯ ಉದ್ಯಮಿ ರಾಜ್ ಕುಂದ್ರಾ ಜಾಮೀನಿನ ಮೇಲೆ ಹೊರಗಿದ್ದಾರೆ.