ಶ್ರೀನಿವಾಸ ಸಿಲ್ವರ್ ಸ್ಕ್ರೀನ್ ಬ್ಯಾನರ್ ಅಡಿಯಲ್ಲಿ ಶ್ರೀನಿವಾಸ ಚಿತ್ತೂರಿ ನಿರ್ಮಿಸಿರುವ ಈ ಚಿತ್ರಕ್ಕೆ ಸಂಗೀತ ಮಾಂತ್ರಿಕ ಇಳಯರಾಜ ಮತ್ತು ಯುವನ್ ಶಂಕರ್ ರಾಜಾ ಸಂಗೀತ ನೀಡುತ್ತಿದ್ದಾರೆ. ವೆನ್ನೆಲ ಕಿಶೋರ್, ಶರತ್ ಕುಮಾರ್, ಸಂಪತ್ ರಾಜ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಬಗ್ಗೆ ಅಕ್ಕಿನೇನಿ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.