ಅಲ್ಲು ಅರ್ಜುನ್ ಸುಕುಮಾರ್ ಕಾಂಬಿನೇಷನ್ನಲ್ಲಿ ಪುಷ್ಪ ಚಿತ್ರವು ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ ಎಂದು ಘೋಷಿಸಿದ್ದಾರೆ. ಮೊದಲ ಭಾಗ ಕಳೆದ ವರ್ಷ ಡಿಸೆಂಬರ್ 17 ರಂದು ಬಿಡುಗಡೆಯಾಗಿತ್ತು. ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಉತ್ತಮ ಯಶಸ್ಸನ್ನು ಕಂಡಿತು. ಇದಲ್ಲದೆ, ಚಿತ್ರವು 365 ಕೋಟಿಗೂ ಅಧಿಕ ಮೊತ್ತದ ಆದಾಯ ಗಳಿಸಿದೆ. ಅಲ್ಲು ಅರ್ಜುನ್ ಪುಷ್ಪ ಚಿತ್ರದಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದು, ಈ ಚಿತ್ರದ ಎರಡನೇ ಭಾಗಕ್ಕಾಗಿ ಬಾಲಿವುಡ್ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ.