NTR 31 Update: ಪ್ರಶಾಂತ್ ನೀಲ್-NTR ಕಾಂಬಿನೇಷನ್ ನಲ್ಲಿ ಸಿನಿಮಾ ಬರಲಿದೆ ಅನ್ನೋ ವಿಚಾರ ಸುದ್ದಿಯಾಗಿತ್ತು. ಇತ್ತೀಚೆಗಷ್ಟೇ ಈ ಚಿತ್ರದ ಬಗ್ಗೆ ಪ್ರಶಾಂತ್ ನೀಲ್ ಒಂದು ಬಿಗ್ ಅಪ್ಡೇಟ್ ನೀಡಿದ್ದು ಎನ್ಟಿಆರ್ ಅಭಿಮಾನಿಗಳಿಗೆ ಸಂತಸ ತಂದಿದೆ.
ಇತ್ತೀಚೆಗಷ್ಟೇ ಆರ್ಆರ್ಆರ್ ಸಿನಿಮಾದ ಮೂಲಕ ಸೂಪರ್ ಸಕ್ಸಸ್ ಗಳಿಸಿದ್ದ ಯಂಗ್ ಟೈಗರ್ ಎನ್ಟಿಆರ್ ತಮ್ಮ ಮುಂದಿನ ಸಿನಿಮಾಗಳಿಗೆ ತಯಾರಿ ನಡೆಸುತ್ತಿದ್ದಾರೆ. ಈ ಕ್ರಮದಲ್ಲಿ ಕೆಜಿಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಎನ್ ಟಿ ಆರ್ (ಎನ್ ಟಿ ರಾಮರಾವ್ ಜೂನಿಯರ್) ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
2/ 8
ಪ್ರಶಾಂತ್ ನೀಲ್-ಎನ್ಟಿಆರ್ ಕಾಂಬಿನೇಷನ್ನಲ್ಲಿ ಸಿನಿಮಾ ಬರಲಿದೆ ಎಂಬ ಮಾತುಗಳು ಕೇಳಿ ಬರುತ್ತಲೇ ಇತ್ತು. ಇದೀಗ ಈ ಚಿತ್ರದ ಬಗ್ಗೆ ಪ್ರಶಾಂತ್ ನೀಲ್ ಪ್ರತಿಕ್ರಿಯಿಸಿದ್ದಾರೆ. ಎನ್ ಟಿಆರ್ ಜೊತೆಗಿನ ಸಿನಿಮಾದ ಶೂಟಿಂಗ್ ಯಾವಾಗ ಶುರುವಾಗುತ್ತೆ ಅನ್ನೋ ಬಗ್ಗೆ ಮಾಹಿತಿ ನೀಡಿದ್ದಾರೆ.
3/ 8
ಮುಂದಿನ ಬೇಸಿಗೆಯಲ್ಲಿ ಕಾಲದ ಶುರುವಿನಲ್ಲಿ ಚಿತ್ರ ಸೆಟ್ಟೇರಲಿದೆ ಎಂದು ಪ್ರಶಾಂತ್ ನೀಲ್ ಹೇಳಿದ್ದಾರೆ. ಎನ್ಟಿಆರ್ 31 ಎಂಬ ವರ್ಕಿಂಗ್ ಟೈಟಲ್ನೊಂದಿಗೆ ಸಿನಿಮಾ ಸೆಟ್ಟೇರಲಿದೆ. ದೊಡ್ಡ ಚಿತ್ರಗಳಿಗೆ ಕೇರಾಫ್ ಅಡ್ರೆಸ್ ಆಗಿರುವ ಪ್ರಶಾಂತ್ ನೀಲ್ ಈ ಸಿನಿಮಾವನ್ನು ಅದೇ ಮಟ್ಟದಲ್ಲಿ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.
4/ 8
ಪ್ರಶಾಂತ್ ನೀಲ್ ಪ್ರಸ್ತುತ ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಅಭಿನಯದ ಸಲಾರ್ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮುಂದಿನ ವರ್ಷ ಸೆಪ್ಟೆಂಬರ್ 28 ರಂದು ಚಿತ್ರ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಎನ್ ಟಿಆರ್ ಸಿನಿಮಾದ ಶೂಟಿಂಗ್ ಆರಂಭಿಸಲು ಸಿದ್ಧತೆ ನಡೆಸುತ್ತಿದ್ದಾರೆ.
5/ 8
ಸ್ಟಾರ್ ಡೈರೆಕ್ಟರ್ ಕೊರಟಾಲ ಶಿವ ಜೊತೆ ಎನ್ ಟಿಆರ್ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾ ಎನ್ಟಿಆರ್ 30 ಆಗಿ ತಯಾರಾಗಲಿದೆ. ಇನ್ನು ಈ ಸಿನಿಮಾದ ಶೂಟಿಂಗ್ ಶುರುವಾಗದ ಕಾರಣ ಎನ್ ಟಿಆರ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
6/ 8
ಅಸಲಿಗೆ ಈ ಚಿತ್ರ ಇದೇ ತಿಂಗಳಲ್ಲೇ ಶುರುವಾಗಬೇಕಿತ್ತು. ಆದರೆ NTR ಕೆಲವು ದಿನಗಳಿಂದ ಭುಜ ಮತ್ತು ಮೊಣಕಾಲು ನೋವಿನಿಂದ ಬಳಲುತ್ತಿದ್ದು, ತಡವಾಗಿದೆ ಎನ್ನಲಾಗುತ್ತಿದೆ. ಸದ್ಯ ಈ ಸಿನಿಮಾದ ಪ್ರಿ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.
7/ 8
ಈ ಸಿನಿಮಾದಲ್ಲಿ ನಾಯಕಿಗಾಗಿ ಕೊರಟಾಲ ವಿಶೇಷ ಕಾಳಜಿ ವಹಿಸುತ್ತಿದ್ದಾರೆ. ಈಗಾಗಲೇ ಹಲವು ಟಾಲಿವುಡ್ ಮತ್ತು ಬಾಲಿವುಡ್ ನಟಿಯರ ಹೆಸರು ಕೇಳಿ ಬರ್ತಿದೆ ಆದ್ರೆ. ಕೊನೆಗೆ ಸಮಂತಾಗೆ ಫಿಕ್ಸ್ ಎಂದು ಹೇಳಲಾಗ್ತಿದೆ.
8/ 8
ಮಾಸ್ ಆ್ಯಕ್ಷನ್ ಎಂಟರ್ ಟೈನರ್ ಆಗಿ ಮೂಡಿಬರಲಿರುವ ಈ ಸಿನಿಮಾದಲ್ಲಿ ಮತ್ತೊಬ್ಬ ನಾಯಕಿಗೆ ಅವಕಾಶವಿದ್ದು, ಇದಕ್ಕೆ ಸಾಯಿ ಪಲ್ಲವಿ ಅವರನ್ನು ಆಯ್ಕೆ ಮಾಡಲಾಗಿದೆಯಂತೆ. ಎನ್ಟಿಆರ್-ಸಾಯಿ ಪಲ್ಲವಿ ಕಾಂಬೋದಲ್ಲಿ ಒಂದು ಹಾಡನ್ನು ಸಹ ಯೋಜಿಸಲಾಗಿದೆ ಎಂದು ವರದಿಯಾಗಿದೆ.