The Matrix Resurrections ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾದ Priyanka Chopra
ಸಾಮಾಜಿಕ ಜಾಲತಾಣದಲ್ಲಿ ಪತಿಯ ಮನೆಯ ಹೆಸರನ್ನು ತೆಗೆದು ಹಾಕುವ ಮೂಲಕ ಸುದ್ದಿಯಲ್ಲಿರುವ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ತಮ್ಮ ಬಹುನಿರೀಕ್ಷಿತ ಸಿನಿಮಾ The Matrix Resurrections ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. (ಚಿತ್ರಗಳು ಕೃಪೆ: ಪ್ರಿಯಾಂಕಾ ಚೋಪ್ರಾ ಇನ್ಸ್ಟಾಗ್ರಾಂ ಖಾತೆ)
ಒಂದರ ಹಿಂದೆ ಒಂದರಂತೆ ಹಾಲಿವುಡ್ ಸಿನಿಮಾಗಳಲ್ಲಿ ನಟಿಸುತ್ತಿರುವ ಪ್ರಿಯಾಂಕಾ ಚೋಪ್ರಾ ಈಗ ದಿ ಮ್ಯಾಟ್ರಿಕ್ಸ್ ರಿಸರೆಕ್ಷನ್ನಲ್ಲಿ ನಟಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಸಿನಿಮಾದಲ್ಲಿನ ಅವರ ಲುಕ್ ಸಹ ಈಗ ರಿವೀಲ್ ಆಗಿದೆ.
2/ 5
ಮ್ಯಾಟ್ರಿಕ್ಸ್ ಸೀರೀಸ್ನ ನಾಲ್ಕನೇ ಭಾಗವಾಗಿರುವ ದಿ ಮ್ಯಾಟ್ರಿಕ್ಸ್ ರಿಸರೆಕ್ಷನ್ ಸಿನಿಮಾದ ರಿಲೀಸ್ ದಿನಾಂಕ ಪ್ರಕಟವಾಗಿದೆ. ಅದರ ಜೊತೆಗೆ ಪ್ರಿಯಾಂಕಾ ಚೋಪ್ರಾ ಅವರ ಪೋಸ್ಟರ್ ಸಹ ರಿಲೀಸ್ ಆಗಿದೆ.
3/ 5
ದಿ ಮ್ಯಾಟ್ರಿಕ್ಸ್ ರಿಸರೆಕ್ಷನ್ ಸಿನಿಮಾದ ಸಿನಿಮಾ ಇದೇ ಡಿಸೆಂಬರ್ 22ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ. ಹಾಲಿವುಡ್ ಸಿನಿಮಾಗಳನ್ನು ಇಷ್ಟಪಡುವವರು ಈ ಚಿತ್ರಕ್ಕಾಗಿ ಕಾದು ಕುಳಿತ್ತಿದ್ದಾರೆ.
4/ 5
ಈಗಾಗಲೇ ದಿ ಮ್ಯಾಟ್ರಿಕ್ಸ್ ರಿಸರೆಕ್ಷನ್ ಸಿನಿಮಾದ ತಂಡ ಪ್ರಚಾರ ಕಾರ್ಯ ಆರಂಭಿಸಿದೆ. ಪ್ರಿಯಾಂಕಾ ಚೋಪ್ರಾ ಸಹ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗಿತಾಗುತ್ತಿದ್ದು, ಅದರ ಚಿತ್ರಗಳನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿದ್ದಾರೆ.
5/ 5
2003ರಲ್ಲಿ ತೆರೆಗೆ ಬಂದ ‘ದಿ ಮ್ಯಾಟ್ರಿಕ್ಸ್ ರೆವಲ್ಯೂಷನ್’ ಸಿನಿಮಾದ ಸೀಕ್ವೆಲ್ ದಿ ಮ್ಯಾಟ್ರಿಕ್ಸ್ ರಿಸರೆಕ್ಷನ್ ಚಿತ್ರವಾಗಿದೆ. ಲಾನಾ ವಿಚೌಸ್ಕಿ ಈ ಚಿತ್ರವನ್ನು ನಿರ್ದೇಶನ ಮಾಡುವುದರ ಜತೆಗೆ ನಿರ್ಮಾಣ ಕೂಡ ಮಾಡಿದ್ದಾರೆ. ಈ ಸಿನಿಮಾದಲ್ಲಿ ಪ್ರಿಯಾಂಕಾ ಸಹ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.