ಐಟಿ ಅಧಿಕಾರಿಗಳ ದಾಳಿಯಿಂದ ಪುಷ್ಪ 2 ಸಿನಿಮಾದ ಶೂಟಿಂಗ್ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ ಎಂಬ ಮಾತು ಕೇಳಿ ಬರುತ್ತಿದೆ. ವೈಜಾಗ್ನಲ್ಲಿ ನಡೆಯುತ್ತಿರುವ ಈ ಸಿನಿಮಾದ ಚಿತ್ರೀಕರಣವನ್ನು ನಿರ್ಮಾಪಕರು ತಾತ್ಕಾಲಿಕವಾಗಿ ನಿಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಅಲ್ಲು ಅರ್ಜುನ್ ಮತ್ತು ಇತರ ಕೆಲವು ಫಾರಿನ್ ಫೈಟರ್ಸ್ಗಳ ಅದ್ಧೂರಿ ಆ್ಯಕ್ಷನ್ ಸೀಕ್ವೆನ್ಸ್ ಚಿತ್ರೀಕರಣವನ್ನು ಪ್ರಾರಂಭಿಸಿದ್ದ ಸುಕುಮಾರನ್ ಸ್ವಲ್ಪ ವಿರಾಮ ತೆಗೆದುಕೊಂಡಿದ್ದಾರೆ.