ಜೀವನದಲ್ಲಿ ಆದಷ್ಟು ಒಬ್ಬರ ಮೇಲೆ ಕೋಪ ಇದ್ರು ಪ್ರೀತಿ ಹಂಚಿ, ತಾಳ್ಮೆಯಿರಲಿ. ನಾನು ಅಂತಿಮ ದರ್ಶನ ಪಡೆದೆನೋ ಇಲ್ವೋ ಎಂಬುದು ಅವರ ಕುಟುಂಬಕ್ಕೆ ತಿಳಿದಿದೆ ಹಾಗೂ ನಮಗೆ ತಿಳಿದಿದೆ. ಕ್ಯಾಮೆರಾ ಮುಂದೆ ಬಂದು ಮಾತನಾಡುವ ಶಕ್ತಿ ನನಗಿರಲಿಲ್ಲ. ಕ್ಯಾಮೆರಾ ಮುಂದೆ ಬಂದು ಮಾತನಾಡದೆ ಇರುವುದು ದೊಡ್ಡ ತಪ್ಪು ಎಂದು ನಾನು ಭಾವಿಸಲಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ ರಾಧಿಕಾ ಪಂಡಿತ್.
ಅಪ್ಪು ಅವರ ಮೇಲಿರುವ ಪ್ರೀತಿಗೆ ನೀವು ಹೀಗೆ ಮಾತನಾಡುತ್ತಿರುವುದು ಸಹಜ. ಅಪ್ಪು ಸರ್ ಅಗಲಿಕೆ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಾದ ನಿಮಗೆ ಎಷ್ಟು ನೋವು ನೀಡುತ್ತಿದೆಯೋ, ಅಷ್ಟೇ ನೋವು ನನಗೂ ನಮ್ಮ ಕುಟುಂಬಕ್ಕೂ ಆಗಿದೆ. ನಮ್ಮೆಲ್ಲರ ನೆಚ್ಚಿನ ಅಪ್ಪು ಸರ್ ಅಗಲಿಕೆ ಎಂದೆಂದಿಗೂ ನಮ್ನನ್ನು ಕಾಡುತ್ತಲೇ ಇರುತ್ತದೆ ಎಂದು ಪುನೀತ್ ರಾಜ್ಕುಮಾರ್ ಅಭಿಮಾನಿಗಳಿಗೆ ಉತ್ತರಿಸಿದ್ದಾರೆ ರಾಧಿಕಾ ಪಂಡಿತ್.