ಸಾಲು ಸಾಲು ಸಿನಿಮಾಗಳ ಸಕ್ಸಸ್ ಖುಷಿಯಲ್ಲಿ ಇರುವ ರಶ್ಮಿಕಾ ಮಂದಣ್ಣ, ಬಾಲಿವುಡ್ನಲ್ಲಿ ಗುಡ್ ಬೈ, 'ಮಿಷನ್ ಮಜ್ನು' ಸಿನಿಮಾ ಮಾಡಿದ್ದಾರೆ. ರಣಬೀರ್ ಕಪೂರ್ ಜೊತೆಗಿನ 'ಅನಿಮಲ್' ಮಾಡ್ತಿದ್ದಾರೆ. ತಮಿಳಿನಲ್ಲಿ ದಳಪತಿ ವಿಜಯ್ ಜೊತೆ ನಟಿಸಿ ಸಿನಿಮಾ ಕೂಡ ಸೂಪರ್ ಹಿಟ್ ಆಗಿದ್ದು ರಶ್ಮಿಕಾ ಫುಲ್ ಖುಷ್ ಆಗಿದ್ದಾರೆ. 'ಪುಷ್ಪ: ದಿ ರೂಲ್' ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆ ರಶ್ಮಿಕಾ ಕಾಣಿಸಿಕೊಳ್ಳಲಿದ್ದಾರೆ. ಮತ್ತೆ ಶ್ರೀವಲ್ಲಿಯನ್ನು ತೆರೆ ಮೇಲೆ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ.