ಈ ಚಿತ್ರದ ಚಿತ್ರೀಕರಣ ಈಗಾಗಲೇ ಶೇಕಡಾ 70 ರಷ್ಟು ಮುಗಿದಿದೆ. ಈ ಸಿನಿಮಾ ಕುರಿತ ಅಪ್ಡೇಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪ್ಡೇಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಾಗ್ ಅಶ್ವಿನ್ ನಿರ್ದೇಶನದಲ್ಲಿ ಪ್ಯಾನ್ ವರ್ಲ್ಡ್ ಚಿತ್ರ ರೆಡಿಯಾಗಿದೆ. ಈ ಚಿತ್ರದಲ್ಲಿ ಪ್ರಭಾಸ್ ಗೆ ನಾಯಕಿಯಾಗಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಈ ಸಿನಿಮಾವನ್ನು ಕಥೆ ರಚಿಸಲು ಭಾರತೀಯ ಮಹಾಕಾವ್ಯ ಮಹಾಭಾರತದಿಂದ ಸ್ಪೂರ್ತಿ ಪಡೆದಿದ್ದಾರೆ. 3ನೇ ಮಹಾಯುದ್ಧದ ಹಿನ್ನೆಲೆ ವೈಜ್ಞಾನಿಕ ಕಾಲ್ಪನಿಕ ಸಿನಿಮಾ ಎಂದು ಹೇಳಲಾಗುತ್ತಿದೆ. ಈ ಚಿತ್ರದಲ್ಲಿ ಪ್ರಭಾಸ್ ಕರ್ಣನನ್ನು ಹೋಲುವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದಲ್ಲಿ ಸಾಹಸ ದೃಶ್ಯ ಹೆಚ್ಚಾಗಿದೆ. ಈ ಸಾಹಸ ದೃಶ್ಯವನ್ನು ಚಿತ್ರೀಕರಿಸಲು ಚಿತ್ರತಂಡ ಹಾಲಿವುಡ್ ಸಾಹಸ ನಿರ್ದೇಶಕರನ್ನು ಕರೆತಂದಿದ್ದಾರೆ.