ಕೇವಲ ಕ್ರೈಸ್ತ ಧರ್ಮದವರು ಮಾತ್ರವಲ್ಲದೆ, ಹಿಂದು ಹಾಗೂ ಮುಸ್ಲಿಂ ಸಮುದಾಯದವರೂ ಕ್ರಿಸ್ಮಸ್ ಹಬ್ಬವನ್ನು ಸರಳವಾಗಿ ಆಚರಿಸಿದ್ದಾರೆ. ಕ್ರಿಸ್ಮಸ್ ಟ್ರೀ ಇಟ್ಟು, ಕೇಕ್ ಕತ್ತರಿಸಿ ಹಬ್ಬ ಮಾಡಲಾಗಿದೆ. ರಾಧಿಕಾ ಪಂಡಿತ್ ಹಾಗೂ ಯಶ್ ಕೂಡ ಕ್ರಿಸ್ಮಸ್ ಆಚರಿಸಿದ್ದಾರೆ.
2/ 6
ಮಕ್ಕಳಾದ ಐರಾ ಹಾಗೂ ಯಥರ್ವ್ ಜತೆ ಸೇರಿ ಡಿಸೆಂಬರ್ 25ರಂದು ಈ ಜೋಡಿ ಹಬ್ಬವನ್ನು ಆಚರಿಸಿದೆ. ಈ ಫೋಟೋಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
3/ 6
ಯಶ್ ಅವರ ಇಬ್ಬರು ಮಕ್ಕಳು ಸಹ ಸೋಷಿಯಲ್ ಮೀಡಿಯಾದಲ್ಲಿ ಈಗಾಗಲೇ ಸಖತ್ ಫೇಮಸ್ ಆಗಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಮಕ್ಕಳ ಕೆಲ ವಿಡಿಯೋ, ಫೋಟೋಗಳನ್ನು ಶೇರ್ ಮಾಡಿದ್ದಾರೆ.
4/ 6
ರಾಧಿಕಾ ಪಂಡಿತ್ ನಟನೆಯಿಂದ ದೂರ ಉಳಿದಿದ್ದಾರೆ. ಆಗೊಂದು ಈಗೊಂದು ಪೋಸ್ಟ್ ಹಾಕುವ ಮೂಲಕ ಅಭಿಮಾನಿಗಳ ಜತೆ ರಾಧಿಕಾ ಪಂಡಿತ್ ಸಂಪರ್ಕದಲ್ಲಿದ್ದಾರೆ.
5/ 6
ಯಶ್ ಹಾಗೂ ರಾಧಿಕಾ ಪಂಡಿತ್ ಹೆಚ್ಚಿನ ಸಮಯವನ್ನು ಮಕ್ಕಳ ಜೊತೆ ಕಳೆಯಲು ಇಷ್ಟ ಪಡುತ್ತಾರೆ. ಈಗಾಗಲೇ ಈ ಜೋಡಿ ಮಕ್ಕಳ ಜೊತೆ ಹಲವಾರು ಕಡೆ ಟ್ರಿಪ್ ಮಾಡಿಕೊಂಡು ಬಂದಿದೆ.
6/ 6
ಯಶ್ ‘ಕೆಜಿಎಫ್ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಸಂಜಯ್ ದತ್ ಅಧೀರನಾಗಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್ ತಿಂಗಳಲ್ಲಿ ಈ ಸಿನಿಮಾ ತೆರೆಗೆ ಬರುತ್ತಿದೆ.