Rohit Shetty: ಶೂಟಿಂಗ್ ವೇಳೆ ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿಗೆ ಅಪಘಾತ; ಗಂಭೀರ ಗಾಯ, ಆಸ್ಪತ್ರೆಗೆ ದಾಖಲು
ಬಾಲಿವುಡ್ ಸ್ಟಾರ್ ನಿರ್ದೇಶಕ ರೋಹಿತ್ ಶೆಟ್ಟಿ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗ್ತಿದೆ. ಹೈದರಾಬಾದ್ ನಲ್ಲಿ ಸಿನಿಮಾ ಶೂಟಿಂಗ್ ವೇಳೆ ಅಪಘಾತ ಸಂಭವಿಸಿದೆ.
ನಿರ್ದೇಶಕ ಹೈದರಾಬಾದ್ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಇಂಡಿಯನ್ ಪೊಲೀಸ್ ಫೋರ್ಸ್ ವೆಬ್ ಸರಣಿ ಶೂಟಿಂಗ್ ಮಾಡ್ತಿದ್ರು. ಈ ವೇಳೆ ಅಪಘಾತ ಸಂಭವಿಸಿದೆ.
2/ 8
ವೆಬ್ ಸರಣಿಯಲ್ಲಿ ಚೇಸಿಂಗ್ ದೃಶ್ಯವನ್ನು ಚಿತ್ರೀಕರಣ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ರೋಹಿತ್ ಶೆಟ್ಟಿಗೆ ಗಂಭೀರ ಗಾಯಗಳಾಗಿವೆ.
3/ 8
ತಕ್ಷಣ ರೋಹಿತ್ ಶೆಟ್ಟಿಯನ್ನು ಸಮೀಪದ ಕಾಮಿನೇನಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ರೋಹಿತ್ ಶೆಟ್ಟಿ ಚೇತರಿಸಿಕೊಳ್ಳುತ್ತಿದ್ದಾರೆ ಆತಂಕ ಪಡಬೇಕಾಗಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ.
4/ 8
ರೋಹಿತ್ ಶೆಟ್ಟಿ ನಿರ್ದೇಶನದ, ಸಿದ್ಧಾರ್ಥ್ ಮಲ್ಹೋತ್ರಾ ಅವರೊಂದಿಗೆ 'ಇಂಡಿಯನ್ ಪೊಲೀಸ್ ಫೋರ್ಸ್' ಎಂಬ ವೆಬ್ ಸರಣಿಯನ್ನು ಮಾಡುತ್ತಿದ್ದಾರೆ. ಈ ವೆಬ್ ಸೀರಿಸ್ ಗಾಗಿ ರಾಮೋಜಿ ಫಿಲಂ ಸಿಟಿಯಲ್ಲಿ ಅದ್ಧೂರಿ ಸೆಟ್ ನಿರ್ಮಿಸಿದ್ದಾರೆ.
5/ 8
ರಾಮೋಜಿ ರಾವ್ ಫಿಲ್ಮ್ ಸಿಟಿಯಲ್ಲಿ ಬೃಹತ್ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗುತ್ತಿದೆ. ಸುಮಾರು 20 ಕೋಟಿಗೂ ಅಧಿಕ ಖರ್ಚು ಮಾಡಿ ಆಕ್ಷನ್ ದೃಶ್ಯ ಚಿತ್ರೀಕರಣ ಮಾಡಲಾಗುತ್ತಿದೆ
6/ 8
ಇದೇ ವೆಬ್ ಸೀರಿಸ್ ಚಿತ್ರೀಕರಣದ ವೇಳೆ ಈ ಮೊದಲು ನಟ ಸಿದ್ಧಾರ್ಥ್ ಮಲ್ಹೋತ್ರಾ ಕೂಡ ಗಾಯಗೊಂಡಿದ್ದರು. ನಟಿ ಶಿಲ್ಪಾ ಶೆಟ್ಟಿ ಕಾಲಿಗೆ ಏಟು ಮಾಡಿಕೊಂಡಿದ್ದರು. ಇದೀಗ ರೋಹಿತ್ ಆಸ್ಪತ್ರೆ ಸೇರಿದ್ದಾರೆ.
7/ 8
ಈ ಸರಣಿಯ ಹೈ ವೋಲ್ಟೇಜ್ ಆಕ್ಷನ್ ದೃಶ್ಯ ಮತ್ತು ಕಾರ್ ಚೇಸಿಂಗ್ ಸೀಕ್ವೆನ್ಸ್ ಶೂಟಿಂಗ್ ಮಾಡಲಾಗುತ್ತಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
8/ 8
ಪೊಲೀಸ್ ಫೋರ್ಸ್ ಮೂಲಕ ರೋಹಿತ್ ಶೆಟ್ಟಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಈ ವೆಬ್ ಸೀರಿಸ್ ಲೋಕಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಅಂದಹಾಗೆ ಈ ಸರಣಿಯಲ್ಲಿ ದೊಡ್ಡ ತಾರಾಬಳಗವೇ ಇದೆ. ಶಿಲ್ಪಾ ಶೆಟ್ಟಿ, ವಿವೇಕ್ ಒಬೆರಾಯ್ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ.