RRR ಚಿತ್ರ ವಿಶ್ವದಾದ್ಯಂತ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ತೆಲುಗು ಚಿತ್ರರಂಗ ಮತ್ತೊಂದು ಹಂತಕ್ಕೆ ಏರುವಂತೆ ಮಾಡಿದೆ. ಜೊತೆಗೆ RRR ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಈ ಸಿನಿಮಾ ಜಪಾನ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಇದು ಅಕ್ಟೋಬರ್ 21 ರಂದು ಬಿಡುಗಡೆಯಾಗುತ್ತಿದೆ. ಅಲ್ಲದೇ ಜಪಾನ್ ನಲ್ಲಿ ಎನ್ ಟಿಆರ್ ಗೆ ಒಳ್ಳೆಯ ಕ್ರೇಜ್ ಇದೆ.