ನಟ, ನಿರ್ದೇಶಕ ಹಾಗೂ ಸಂಗೀತ ನಿರ್ದೇಶಕ ಸಾಧುಕೋಕಿಲ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ 'ಅನುಷ್ಕ' ಚಿತ್ರ ಮುಂದಿನ ತಿಂಗಳು ಅಂದರೆ ಮೇ 10ರಂದು ಬಿಡುಗಡೆಯಾಗಲಿದೆ. ಶ್ರೀನಂಜುಂಡೇಶ್ವರ ಪ್ರೊಡಕ್ಷನ್ ಹೌಸ್ ಅಡಿ ಎಸ್.ಕೆ.ಗಂಗಾಧರ್ ನಿರ್ಮಿಸಿರುವ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ದೇವರಾಜ್‍ಕುಮಾರ್ ನಿರ್ದೇಶಿಸಿದ್ದಾರೆ. ಬೆಂಗಳೂರು, ಮೈಸೂರು, ಅರಸಿಕೆರೆ ಹಾಗೂ ಬ್ಯಾಂಕಾಕ್‍ನಲ್ಲಿ 72ದಿನಗಳ ಚಿತ್ರೀಕರಣ ನಡೆದಿದ್ದು, ವೀನಸ್ ಮೂರ್ತಿ ಅವರ ಛಾಯಾಗ್ರಹಣವಿದೆ. ವಿಕ್ರಂ ಸೆಲ್ವ ಸಂಗೀತ ನೀಡಿರುವ ಸಿನಿಮಾದಲ್ಲಿ ರೂಪೇಶ್ ಶೆಟ್ಟಿ, ಅಮೃತ, ರೂಪ ಶರ್ಮ, ಬಾಲರಾಜ್, ಆದಿಲೋಕೇಶ್ ಮುಂತಾದವರು ಅಭಿನಯಿಸಿದ್ದಾರೆ.