ನಟಿ ಸಮಂತಾ ಅಭಿನಯದ ‘ಶಾಕುಂತಲಂ’ ಸಿನಿಮಾದಲ್ಲಿ ತೆರೆಗೆ ಬರಲು ಸಿದ್ಧವಾಗಿದೆ. ಈ ಚಿತ್ರದ ಕೆಲಸಗಳು ಪೂರ್ಣಗೊಂಡು ಬಹಳ ಸಮಯ ಕಳೆದಿತ್ತು ಆದ್ರೆ ಸಿನಿಮಾ ರಿಲೀಸ್ ದಿನಾಂಕ ಫಿಕ್ಸ್ ಆಗಿರಲಿಲ್ಲ.
2/ 8
ಈಗ ಶಾಕುಂತಲಂ’ ಸಿನಿಮಾ ರಿಲೀಸ್ ದಿನಾಂಕ ರಿವೀಲ್ ಆಗಿದೆ. ಹೊಸ ಪೋಸ್ಟರ್ ರಿಲೀಸ್ ಮಾಡಿ ಈ ವಿಚಾರ ಬಹಿರಂಗ ಮಾಡಲಾಗಿದೆ.
3/ 8
ಹೊಸ ಪೋಸ್ಟರ್ನಲ್ಲಿ ಸಮಂತಾ ಲುಕ್ ಗಮನ ಸೆಳೆದಿದೆ. ಈ ಚಿತ್ರ ಫೆಬ್ರವರಿ 17ರಂದು ವಿಶ್ವಾದ್ಯಂತ ತೆರೆಗೆ ಬರುತ್ತಿದೆ.
4/ 8
ಈ ಚಿತ್ರ 3ಡಿಯಲ್ಲೂ ಮೂಡಿ ಬರುತ್ತಿದೆ ಅನ್ನೋದು ವಿಶೇಷ. ಪೌರಾಣಿಕ ಹಿನ್ನೆಲೆ ಜತೆಗೆ 3ಡಿ ವರ್ಷನ್ ಕೂಡ ಇರುವುದರಿಂದ ಚಿತ್ರದ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗಿದೆ.
5/ 8
ಪೌರಾಣಿಕ ಕಥಾಹಂದರ ಇರುವ ಈ ಚಿತ್ರವನ್ನು ಸಮಂತಾ ಆಯ್ಕೆ ಮಾಡಿಕೊಂಡಿದ್ದು, ಅಭಿಮಾನಿಗಳು ಸಿನಿಮಾ ಬಗ್ಗೆ ಭಾರೀ ನಿರೀಕ್ಷೆ ಹೊಂದಿದ್ದಾರೆ.
6/ 8
ಖ್ಯಾತ ನಿರ್ದೇಶಕ ಗುಣಶೇಖರ್ ಶಾಕುಂತಲಂ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ನೀಲಿಮಾ ಗುಣ ಅವರ ನಿರ್ಮಾಣದಲ್ಲಿ ಚಿತ್ರ ಮೂಡಿಬಂದಿದೆ.
7/ 8
ಕನ್ನಡ, ಹಿಂದಿ, ಮಲಯಾಳಂ ಮತ್ತು ತಮಿಳಿನಲ್ಲೂ ಈ ಚಿತ್ರ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್ ಪುತ್ರಿ ಅಲ್ಲು ಅರ್ಹಾ ಕೂಡ ಬಣ್ಣ ಹಚ್ಚಿರೋ ವಿಶೇಷವಾಗಿದೆ
8/ 8
ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಸಮಂತಾ ಸದ್ಯ ಮನೆಯಲ್ಲೇ ರೆಸ್ಟ್ ಮಾಡ್ತಿದ್ದಾರೆ. ಈ ಮಧ್ಯೆ ಅವರು ಅಭಿಮಾನಿಗಳಿಗೆ ಚಿತ್ರತಂಡ ಸರ್ಪ್ರೈಸ್ ನೀಡಿದೆ. ಸಮಂತಾರನ್ನು ತೆರೆ ಮೇಲೆ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ.