ಈ ಸಿನಿಮಾದಲ್ಲಿ ಶಕುಂತಲಾ ಪಾತ್ರದಲ್ಲಿ ಸಮಂತಾ ನಟಿಸಿದ್ದರೆ, ಮಲಯಾಳಂ ಹೀರೋ ದೇವ್ ಮೋಹನ್ ದುಷ್ಯಂತ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಮಂತಾ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನೀಲಿಮಾ ಗುಣ ಮತ್ತು ದಿಲ್ ರಾಜು ಈ ಚಿತ್ರವನ್ನು ನಿರ್ಮಿಸುತ್ತಿದ್ದು ಸಿನಿಮಾ ಪೌರಾಣಿಕ ಕಥೆಯಾದ ಶಾಕುಂತಲಂ ಅನ್ನು ಆಧರಿಸಿದೆ. ಈ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾವಾಗಿ ಪ್ರೇಕ್ಷಕರ ಮುಂದೆ ಬರುತ್ತಿದೆ.